More

    ಸಿದ್ದು ಹೇಳಿಕೆಯನ್ನು ಕಾಂಗ್ರೆಸ್ ಕಾರ್ಯಕರ್ತರೇ ಒಪ್ಪಲ್ಲ: ಈಶ್ವರಪ್ಪ

    ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಏಕವಚನ ಹಾಗೂ ಅಸಭ್ಯ ಪದಗಳಿಂದ ಟೀಕಿಸಿದರೆ ರಾಜ್ಯದ ಜನರ ಮಾತಿರಲಿ ಖುದ್ದು ಕಾಂಗ್ರೆಸ್ ಕಾರ್ಯಕರ್ತರೂ ಒಪ್ಪಿಕೊಳ್ಳುವುದಿಲ್ಲ ಎಂಬ ವಾಸ್ತವ ಸಂಗತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕೆಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
    ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾಯಿ ಮರಿಗೆ ಹೋಲಿಸುವ ಮೂಲಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ. ಇದಕ್ಕೆ ಕ್ಷಮೆ ಕೋರುವ ಬದಲು ನನ್ನದು ಹಳ್ಳಿ ಭಾಷೆ ಎಂದು ಸಮರ್ಥನೆ ಮಾಡಿಕೊಂಡಿರುವುದು ಖಂಡನೀಯ. ಸಿದ್ದರಾಮಯ್ಯ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಬೇಕೆಂದರು.
    ರಾಜಕೀಯ ತಂತ್ರಗಾರಿಕೆ ಬಗ್ಗೆ ನಮ್ಮ ನಾಯಕರಿಗೆ ಅರಿವು ಇರಲಿಲ್ಲ. ನಮಗೆ ಅರಿವು ಮೂಡಿಸಿದ್ದೇ ಪ್ರತಿಪಕ್ಷಗಳು. ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಹಾಗೂ ವಸಂತ ಬಂಗೇರ ಇಬ್ಬರೇ ಶಾಸಕರಾಗಿದ್ದ ಸಂದರ್ಭದಲ್ಲಿ ವಸಂತ ಬಂಗೇರ ಅವರನ್ನು ಹೈಜಾಕ್ ಮಾಡಲಾಯಿತು. ಅವರು ಮಾಡಿದಾಗ ಎಲ್ಲವೂ ಸರಿ. ನಾವು ತಂತ್ರಗಾರಿಕೆ ಮಾಡಿದರೆ ಮಾತ್ರ ತಪ್ಪು ಎನ್ನುವುದು ಹಾಸ್ಯಾಸ್ಪದವಾಗಿದೆ ಎಂದರು.
    ಕಾಂಗ್ರೆಸ್‌ನವರು ಸುಳ್ಳು ಅಂಕಿ ಅಂಶಗಳನ್ನು ನೀಡಿ ಅದನ್ನೇ ನಿಜವೆಂದು ಬಿಂಬಿಸಲು ಚಿತ್ರದುರ್ಗದಲ್ಲಿ ಎಸ್ಸಿ, ಎಸ್ಟಿ ಸಮಾವೇಶ ಮಾಡಲು ಮುಂದಾಗಿದ್ದಾರೆ. ಅವರು ನಿಜಕ್ಕೂ ಎಸ್ಸಿ, ಎಸ್ಟಿ ಸಮುದಾಯಕ್ಕೆ ಏನಾದರೂ ಕೊಡುಗೆ ನೀಡಿದ್ದರೆ ಮೀಸಲು ಕ್ಷೇತ್ರಗಳಲ್ಲಿ ಅವರೇ ಗೆಲ್ಲಬೇಕಿತ್ತು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯಲಿದೆ ಎಂಬ ಸಮೀಕ್ಷೆ ನಿಜವಾಗುವುದಿಲ್ಲ ಎಂದು ಹೇಳಿದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts