ಹೊಸನಗರ: ರಾಣೆಬೆನ್ನೂರು ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಜಯನಗರ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ದಾಟಿ ಪಕ್ಕದ ಮನೆಯ ಅಂಗಳದಲ್ಲಿ ಪಲ್ಟಿಯಾಗಿ ಬಿದ್ದಿದೆ.

ಗುರುವಾರ ಸಂಜೆ ಗೋವಾದಿಂದ ಬಂದು ಕಾರು ಜಯನಗರ ಶರಾವತಿ ನದಿ ಕ್ರಾಸ್‌ನಲ್ಲಿ ನಿಯಂತ್ರಣ ತಪ್ಪಿದೆ. ರಸ್ತೆ ದಾಟಿ ಮರಕ್ಕೆ ತಾಗಿದ ನಂತರ ಪಕ್ಕದಲ್ಲಿದ್ದ ಮನೆ ಅಂಗಳಕ್ಕೆ ಪಲ್ಟಿ ಹೊಡೆದು ಬಿದ್ದಿದೆ.
ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಸಣ್ಣ ಪುಟ್ಟ ಗಾಯವಾಗಿದೆ. ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.