

ಹೊಸನಗರ: ಪಟ್ಟಣ ಪಂಚಾಯಿತಿ ವ್ಯಾಪ್ತಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಗೋಪಾಲಕೃಷ್ಣ ಬೇಳೂರು ವೀಕ್ಷಿಸಿದರು. ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ಕೊಡಚಾದ್ರಿ ಸರ್ಕಾರಿ ಕಾಲೇಜಿನಿಂದ ಮಾವಿನಕೊಪ್ಪ ರಸ್ತೆವರೆಗಿನ ಹೈಮಾಸ್ಟ್ ಲೈಟ್ ಅಳವಡಿಕೆ, ಕಾಲೇಜು ಮುಂಭಾಗದ ಪ್ರಯಾಣಿಕರ ತಂಗುದಾಣ, ಹೊಸನಗರ ಸರ್ಕಾರಿ ಪದವಿಪೂರ್ವ ಕಾಲೇಜಿನ ನೂತನ ಕೊಠಡಿಗಳ ನಿರ್ಮಾಣ, ತಾಲೂಕು ಸರ್ಕಾರಿ ಆಸ್ಪತ್ರೆ ಹೆಚ್ಚುವರಿ ಲ್ಯಾಬ್ ಕಟ್ಟಡದ ಕಾಮಗಾರಿ ವೀಕ್ಷಿಸಿದರು.
ಕಾಲೇಜುಗಳಲ್ಲಿ ಶೌಚಗೃಹ ನಿರ್ಮಾಣ, ಸರ್ಕಾರಿ ಆಸ್ಪತ್ರೆಗೆ ಸಿಬ್ಬಂದಿ ನಿಯೋಜನೆಗೆ ಅಧಿಕಾರಿಗಳು ಮನವಿ ಮಾಡಿದರು. ಶೀಘ್ರ ಅಗತ್ಯ ಕ್ರಮ ಒದಗಿಸಲಾಗುವುದು ಎಂದರು. ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಡೂರು ಚಂದ್ರಮೌಳಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರ್ ಹೂವಿನಕೋಣೆ, ಕಾಲೇಜು ಸಮಿತಿ ಉಪಾಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಸಣ್ಣಕ್ಕಿ ಮಂಜು, ಗ್ರಾಪಂ ಅಧ್ಯಕ್ಷ ಪ್ರವೀಣ್, ಸದಸ್ಯ ಮಹೇಂದ್ರ ಇತರರಿದ್ದರು.