More

    ಒಂದು ದೇಶ, ಒಂದು ಚುನಾವಣೆ ಉಪನ್ಯಾಸ: ಬಳ್ಳೆಕೆರೆ ಸಂತೋಷ್

    ಶಿವಮೊಗ್ಗ: ನರೇಂದ್ರ ಮೋದಿ ವಿಚಾರ ಮಂಚ್‌ನ ಜಿಲ್ಲಾ ಘಟಕದಿಂದ ಮಾ.27ರಂದು ಸಂಜೆ 5.30ಕ್ಕೆ ನೆಹರು ಕ್ರೀಡಾಂಗಣದಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರಿಂದ ‘ಒಂದು ದೇಶ, ಒಂದು ಚುನಾವಣೆ’ ಕುರಿತು ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ ಎಂದು ಮಂಚ್‌ನ ರಾಜ್ಯಾಧ್ಯಕ್ಷ ಬಳ್ಳೆಕೆರೆ ಸಂತೋಷ್ ತಿಳಿಸಿದರು.
    ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ನರೇಂದ್ರ ಮೋದಿ ವಿಚಾರ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷ ರವಿ ಚಾಣಕ್ಯ, ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿ ಪಾಲ್ಗೊಳ್ಳುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಎಂಎಲ್‌ಸಿಗಳಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಶಾಸಕ ಕೆ.ಬಿ.ಅಶೋಕ್‌ನಾಯ್ಕ, ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಮಾಜಿ ಎಂಎಲ್‌ಸಿ ಎಂ.ಬಿ.ಭಾನುಪ್ರಕಾಶ್, ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ ಸಹಕಾರ್ಯವಾಹ ಟಿ.ಪಟ್ಟಾಭಿರಾಮ್, ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ರಾಜ್ಯ ಉಪಾಧ್ಯಕ್ಷ ಎಸ್.ದತ್ತಾತ್ರಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಸೇರಿ ಹಲವರು ಭಾಗವಹಿಸುವರು ಎಂದರು.
    ಮಂಚ್‌ನ ಸದಸ್ಯ ಹರಿಕೃಷ್ಣ ಮಾತನಾಡಿ, ಒಂದು ದೇಶ, ಒಂದು ಚುನಾವಣೆ ವರ್ತಮಾನಕ್ಕೆ ಸರಿಯಾಗಿ ಹೊಂದುಕೊಳ್ಳುತ್ತದೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ಚಕ್ರವರ್ತಿ ಸೂಲಿಬೆಲೆ ಅವರು ತಮ್ಮದೇ ವಿಚಾರ ಮಂಡಿಸುವರು. ಅದನ್ನು ಒಪ್ಪಿಕೊಳ್ಳಲೇಬೇಕೆನ್ನುವ ಬಲವಂತವಿಲ್ಲ. ಆದರೆ ದೇಶಕ್ಕೆ ಅನುಕೂಲವಾಗುವ, ಚುನಾವಣಾ ವೆಚ್ಚ ಕಡಿಮೆಯಾಗುವ ಹಾಗೂ ರಾಷ್ಟ್ರದ ಐಕ್ಯತೆಗೆ ಸಹಕಾರಿ ಆಗುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts