ಡೆತ್​ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಎಫ್​ಡಿಎ ಧರ್ಮಸ್ಥಳದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್​ನೋಟ್ ಬರೆದಿಟ್ಟು ಜಿಲ್ಲಾಧಿಕಾರಿ ಕಚೇರಿಯಿಂದ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್​ಡಿಎ) ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಮೇಲಧಿಕಾರಿಗಳ ಕಿರುಕುಳ ಕಾರಣದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್​ನೋಟ್​ ಬರೆದಿಟ್ಟು ಎಫ್​ಡಿಎ ಗಿರಿರಾಜ್ ನಾಪತ್ತೆಯಾಗಿದ್ದ. ಸೆ. 28ರಂದು ಈ ಘಟನೆ ನಡೆದಿತ್ತು. ಗಿರಿರಾಜ್​ ಅವರನ್ನು ಪತ್ತೆ ಮಾಡಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಾಕಷ್ಟು ಶೋಧ ಕಾರ್ಯ ನಡೆಸಿತ್ತು. ಆದಾಗ್ಯೂ ಗಿರಿರಾಜ್ ಪತ್ತೆಯಾಗಿರಲಿಲ್ಲ. ಇದಾದ ಬಳಿಕ ಗಿರಿರಾಜ್​ ಪತ್ನಿ ಜ್ಯೋತಿ, ಶಿವಮೊಗ್ಗದ ಜಯನಗರ ಪೊಲೀಸ್​ ಠಾಣೆಗೆ ದೂರು … Continue reading ಡೆತ್​ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಎಫ್​ಡಿಎ ಧರ್ಮಸ್ಥಳದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ