More

    ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

    ಶಿವಮೊಗ್ಗ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಕೂಡಲೇ ಅಂಗೀಕರಿಸಿ ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವಂತೆ ಒತ್ತಾಯಿಸಿ ಡಿಎಸ್‌ಎಸ್ ನೇತೃತ್ವದಲ್ಲಿ ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
    ಆಯೋಗದ ವರದಿಯನ್ನು ಎಸ್ಸಿ, ಎಸ್ಟಿ ಭೂ ಪರಭಾರೆ ನಿಷೇಧ ಕಾಯ್ದೆಗೆ ಅನ್ವಯವಾಗುವಂತೆ ತಿದ್ದುಪಡಿ ಮಾಡಬೇಕು. ವರದಿ ಸಲ್ಲಿಕೆಯಾಗಿ 10 ವರ್ಷ ಕಳೆದರೂ ಸರ್ಕಾರ ಅದರ ಬಗ್ಗೆ ಸ್ಪಷ್ಟ ನಿಲುವು ಪ್ರದರ್ಶಿಸದೇ ಇರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
    ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಮೀಸಲಿಟ್ಟ ಹಣವನ್ನು ಸರ್ಕಾರ ಅನ್ಯ ಉದ್ಧೇಶಕ್ಕೆ ಬಳಸುತ್ತಿರುವುದು ಖಂಡನೀಯ. ಮೀಸಲಿಟ್ಟ ಹಣವನ್ನು ಮರಳಿ ಪಡೆಯಲು ಸರ್ಕಾರ ರೂಪಿಸಿರುವ ಕಾಯ್ದೆಯನ್ನು ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿದರು.
    ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡು ಶಿಕ್ಷಣ, ಉದ್ಯೋಗ ಮತ್ತಿತರ ಸೌಲಭ್ಯಗಳನ್ನು ಹೊಂದಿರುವವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಇಂತಹ ಪ್ರಮಾಣಪತ್ರ ನೀಡಿರುವ ಅಧಿಕಾರಿಗಳನ್ನು ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಬೇಕು. ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
    ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ರಮೇಶ್ ಚಿಕ್ಕಮರಡಿ, ಶಿವಬಸಪ್ಪ, ರವಿ ಹರಿಗೆ, ಎಂ. ಏಳುಕೋಟಿ, ಶಾಂತಮ್ಮ ಸೂಗೂರು, ಬೊಮ್ಮನಕಟ್ಟೆ ಕೃಷ್ಣ, ಅಶೋಕ ಜೀನಹಳ್ಳಿ, ಎಡವಾಲ ಹನುಂತಪ್ಪ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts