More

    ಚಿಲುಮೆ ವಿರುದ್ಧ ಸಮಗ್ರ ತನಿಖೆಯಾಗಲಿ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿ ಅಕ್ರಮ ಎಸಗಿರುವ ಚಿಲುಮೆ ಸಂಸ್ಥೆ ವಿರುದ್ಧ ಸಮಗ್ರ ತನಿಖೆಯಾಗಬೇಕು. ಇದರಲ್ಲಿ ಯಾವುದೇ ಪಕ್ಷದವರ ಪಾತ್ರವಿದ್ದರೂ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಾಸಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.
    ನಮ್ಮ ಹಿರಿಯರ ತ್ಯಾಗ, ಬಲಿದಾನದಿಂದ ಸ್ವತಂತ್ರೃ ಬಂದಿದೆ. ಅದರ ಮುಂದುವರಿದ ಭಾಗವಾಗಿ ಮತದಾನದ ಹಕ್ಕು ಸಿಕ್ಕಿದೆ. ಅದನ್ನೇ ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಈ ಸಂಸ್ಥೆಯೊಂದಿಗೆ ಯಾವುದೇ ಗಣ್ಯರು ಕೈ ಜೋಡಿಸಿದ್ದರೂ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಬೇಕೆಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
    ಆಧುನಿಕ ಕಾಲಘಟ್ಟದಲ್ಲಿ ಪರಿಸ್ಥಿತಿ ಇನ್ನಷ್ಟು ಸುಧಾರಣೆಯಾಗಬೇಕೇ ಹೊರತು ಇರುವ ವ್ಯವಸ್ಥೆಯನ್ನು ಹಾಳು ಮಾಡಬಾರದು. ಇಂತಹ ಕೃತ್ಯ ಸಲ್ಲದು. ಮೊದಲೇ ಜನರು ರಾಜಕೀಯ ವ್ಯವಸ್ಥೆಯಿಂದ ಬೇಸತ್ತು ಮತದಾನದಲ್ಲಿ ಭಾಗವಹಿಸುವುದು ಕಡಿಮೆಯಾಗುತ್ತಿದೆ. ಇಂತಹ ಘಟನೆಗಳು ಜನರನ್ನು ಮತ್ತಷ್ಟು ಘಾಸಿಗೊಳಿಸುತ್ತದೆ ಎಂದು ಹೇಳಿದರು.
    ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮಧ್ಯ ಪ್ರವೇಶಿಸಬೇಕು. ಸರಿಯಾದ ನಿಟ್ಟಿನಲ್ಲಿ ತನಿಖೆ ನಡೆಯುವಂತೆ ನೋಡಿಕೊಳ್ಳಬೇಕು. ಆ ಮೂಲಕ ಜನರಲ್ಲಿ ವ್ಯವಸ್ಥೆ ಬಗ್ಗೆ ನಂಬಿಕೆ ಮೂಡುವಂತೆ ಮಾಡಬೇಕೆಂದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts