More

    ಸಿದ್ದು ವಿರುದ್ಧ ಡಿಕೆಶಿ ಕ್ರಮ ಕೈಗೊಳ್ಳಲಿ: ಕೆ.ಎಸ್.ಈಶ್ವರಪ್ಪ ಸವಾಲು

    ಶಿವಮೊಗ್ಗ: ಎಲ್ಲ ರಾಜಕೀಯ ಪಕ್ಷಗಳಿಗೂ ಅದರದ್ದೇ ಆದ ಚೌಕಟ್ಟಿದೆ. ನಾಯಕರಿಗೆ ಅವರದ್ದೇ ಆದ ಜವಾಬ್ದಾರಿಗಳಿವೆ. ಆದರೆ ಎಐಸಿಸಿ, ಕೆಪಿಸಿಸಿಯನ್ನೂ ಮೀರಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಐವರು ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. ಇದು ರಾಜಕೀಯ ವ್ಯಭಿಚಾರ. ತಾಕತ್ತಿದ್ದರೆ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಇಲ್ಲವೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.
    ತಮ್ಮ ಹಿಂಬಾಲಕರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಇನ್ನಿಲ್ಲದ ಪ್ರಯತ್ನ ಮಾಡುತ್ತಿರುವುದು ಅವರ ವರ್ತನೆಯಿಂದ ಜಗಜ್ಜಾಹೀರಾಗಿದೆ. ಕಾರ್ಯಕರ್ತರನ್ನು ಹುರಿದುಂಬಿಸಲು ಈ ಘೋಷಣೆ ಮಾಡಿದ್ದೇನೆ ಎನ್ನುವ ಸಿದ್ದರಾಮಯ್ಯ ಎಲ್ಲ 224 ಕ್ಷೇತ್ರಕ್ಕೂ ಅಭ್ಯರ್ಥಿ ಘೋಷಣೆ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸಲಿ ಎಂದು ವ್ಯಂಗ್ಯವಾಡಿದರು.
    ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡಿದ್ದು ತಪ್ಪು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇಷ್ಟೇ ಸಾಲದು ಸಿದ್ದರಾಮಯ್ಯ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ಇಲ್ಲದೇ ಹೋದರೆ ಡಿ.ಕೆ.ಶಿವಕುಮಾರ್ ಅವರ ಸಾಮರ್ಥ್ಯದ ಬಗ್ಗೆಯೇ ಅನುಮಾನಗಳು ಹುಟ್ಟುತ್ತವೆ.
    ದೇಶದಲ್ಲೇ ನಿರ್ನಾಮವಾಗುತ್ತಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ಅಲ್ಪಸ್ವಲ್ಪ ಉಸಿರಾಡುತ್ತಿದೆ. ಕಾಂಗ್ರೆಸ್‌ನ ಈ ತಿಕ್ಕಲುತನದಿಂದ ಬಿಜೆಪಿ ಬೆಳೆದಿಲ್ಲ. ನಮ್ಮ ಪಕ್ಷ ಬೆಳೆದಿರುವುದು ಸಿದ್ಧಾಂತ, ರಾಷ್ಟ್ರೀಯತೆ ಹಾಗೂ ನಾಯಕತ್ವದ ಅಂಶಗಳಿಂದ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಈಶ್ವರಪ್ಪ ಪ್ರತಿಕ್ರಿಯಿಸಿದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts