ಅರಣ್ಯ ಪ್ರದೇಶ ರಕ್ಷಣೆ ಅನಿವಾರ್ಯ

26 tth 01
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿ ತೀರ್ಥಹಳ್ಳಿ ತಾಲೂಕಿನ ಶುಂಠಿಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಅರಣ್ಯೀಕರಣ ಕಾರ್ಯಕ್ರಮಕ್ಕೆ ವಲಯ ಅರಣ್ಯಾಧಿಕಾರಿ ಸಂಜಯ್ ಚಾಲನೆ ನೀಡಿದರು. ಪ್ರಕಾಶ್, ವಿವೇಕ್ ವಿನ್ಸೆಂಟ್ ಪಾಯಸ್, ದೀಪು ಇತರರಿದ್ದರು.
Published on

ತೀರ್ಥಹಳ್ಳಿ: ಅರಣ್ಯ ನಾಶದಿಂದ ಕಾಡು ಪ್ರಾಣಿಗಳು ಜನರ ಭಯವಿಲ್ಲದೆ ಜನವಸತಿ ಪ್ರದೇಶಕ್ಕೆ ಧಾವಿಸುತ್ತಿದ್ದು, ಅರಣ್ಯ ಪ್ರದೇಶ ಉಳಿಸಿಕೊಳ್ಳುವ ಅನಿವಾರ್ಯ ಎದುರಾಗಿದೆ ಎಂದು ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಸಂಜಯ್ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ ಅರಣ್ಯೀಕರಣ ಯೋಜನೆಯಡಿ ಬಸವಾನಿ ಸಮೀಪ ಶುಂಠಿಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಅರಣ್ಯೀಕರಣ ಕಾರ್ಯಕ್ರಮದಲ್ಲಿ ಮಾತನಾಡಿ, ಎಗ್ಗಿಲ್ಲದೇ ನಡೆದಿರುವ ಪರಿಸರ ನಾಶದಿಂದ ಕಾಡು ಪ್ರಾಣಿಗಳು ನಗರ ಪ್ರದೇಶಗಳಿಗೂ ದಾಳಿ ಇಡುವುದಕ್ಕೆ ಪ್ರಾರಂಭವಾಗಿದೆ. ಪರಿಸರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು 500ಕ್ಕೂ ಹೆಚ್ಚು ಹಣ್ಣಿನ ಗಿಡಗಳನ್ನು ನೆಡುತ್ತಿರುವುದು ಪ್ರಶಂಸನೀಯ ಎಂದು ತಿಳಿಸಿದರು.

ಬೆಳ್ತಂಗಡಿಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ, ವೀರೇಂದ್ರ ಹೆಗ್ಡೆ ಅವರ ಚಿಂತನೆಯ ಗ್ರಾಮಾಭಿವೃದ್ಧಿ ಯೋಜನೆಯಡಿ 35 ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆ ಅತ್ಯಂತ ಪ್ರಮುಖವಾದದ್ದು. ಕಾಡಿನ ಪಾಣಿಗಳಿಗೆ ಆಹಾರ ಒದಗಿಸಬೇಕು ಎಂಬುದೇ ಯೋಜನೆ ಆಶಯ ಎಂದರು.

ಬಸವಾನಿ ಗ್ರಾಪಂ ಅಧ್ಯಕ್ಷೆ ಚೇತನಾ ಶ್ರೀನಾಥ್, ಉಪಾಧ್ಯಕ್ಷ ದೀಪು, ಜನಜಾಗೃತಿ ವೇದಿಕೆಯ ಸೊಪ್ಪುಗುಡ್ಡೆ ರಾಘವೇಂದ್ರ, ಕಾಲೇಜಿನ ಪ್ರಾಚಾರ್ಯ ಪ್ರಕಾಶ್, ಪ್ರೌಢಶಾಲೆ ಮುಖ್ಯಶಿಕ್ಷಕಿ ಜಯಲಕ್ಷ್ಮೀ, ಮುರುಳೀಧರ ಶೆಟ್ಟಿ, ಸುರೇಶ್ ಶೆಟ್ಟಿ, ಯೋಜನಾಧಿಕಾರಿ ನಾಗರಾಜ ಕುಲಾಲ್ ಮತ್ತು ಮಮತಾ ಶೆಟ್ಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net