ಪಠ್ಯದ ಜತೆಗೆ ಕ್ರೀಡೆಗೂ ಆದ್ಯತೆ ಕೊಡಿ

20-ANP-P1
ರಾಷ್ಟ್ರಮಟ್ಟದಲ್ಲಿ ಪದಕ ಗಳಿಸಿದ ಆನಂದಪುರದ ಪ್ರಾರ್ಥನಾ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಗೋಪಾಲಕೃಷ್ಣ ಬೇಳೂರು, ದೇವರಾಜ್, ಮೋಹನ್, ಗಜೇಂದ್ರ, ಸಿರಿಜಾನ್ ಇತರರಿದ್ದರು.
Published on

ಆನಂದಪುರ: ವಿದ್ಯಾರ್ಥಿಗಳು ಅಧ್ಯಯನದ ಜತೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗೂ ಆದ್ಯತೆ ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಮುಖ್ಯ ಬಸ್ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾ ಸಾಧನೆ ಮಾಡಿದ ಪ್ರಾರ್ಥನಾ ರಾಮಕೃಷ್ಣ ಶಾಲೆ ವಿದ್ಯಾರ್ಥಿಗಳಿಗೆ ನಾಗರಿಕ ಸನ್ಮಾನ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿರುವುದು ಶ್ಲಾಘನೀಯ. ಕ್ರೀಡೆಗಳಿಂದ ದೈಹಿಕ ಸದೃಢತೆ ಮತ್ತು ಮಾನಸಿಕ ಪರಿಪಕ್ವತೆ ಉಂಟಾಗುತ್ತದೆ. ವಿದ್ಯಾರ್ಥಿಗಳ ಆಸಕ್ತಿ ಮತ್ತು ಸಾಮರ್ಥ್ಯ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಇತ್ತೀಚೆಗೆ ಛತ್ತೀಸಗಡದಲ್ಲಿ ನಡೆದ ಜ್ಯೂನಿಯರ್ ನ್ಯಾಷನಲ್ ಲೆವೆಲ್ ಥ್ರೋಬಾಲ್ ಪಂದ್ಯದಲ್ಲಿ ಚಿನ್ನದ ಪದಕ ಗಳಿಸಿದ ಕೀರ್ತಿ, ಆದ್ಯಾ, ಬೆಳ್ಳಿ ಪದಕ ಗಳಿಸಿದ ನಿಶ್ಚಿತಾ ಮತ್ತು ನಿರೀಕ್ಷಾ, ಕಂಚಿನ ಪದಕ ಗಳಿಸಿದ ಮೋಹಿತ್, ನೆಹಾಲ್ ಮತ್ತು ವರುಣ್ ಅವರನ್ನು ಸನ್ಮಾನಿಸಲಾಯಿತು.

ರಾಮಕೃಷ್ಣ ವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ದೇವರಾಜ್, ಆನಂದಪುರ ಗ್ರಾಪಂ ಸದಸ್ಯ ಮೋಹನ್, ಗಜೇಂದ್ರ, ಸಿರಿಜಾನ್, ಸಬ್ ಇನ್‌ಸ್ಪೆಕ್ಟರ್ ಯುವರಾಜ್ ಕಂಬಳಿ, ಪ್ರಮುಖರಾದ ಎನ್.ಉಮೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net