More

    ಹರ್ಷನ ಮನೆ ಬಳಿ ತಡರಾತ್ರಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ ದುಷ್ಕರ್ಮಿಗಳು! ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ

    ಶಿವಮೊಗ್ಗ: ಸೋಮವಾರ ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ನಲ್ಲಿ ಕೂಗುತ್ತಾ ಓಡಾಡಿದ ಅನ್ಯಕೋಮಿನ ಯುವಕರ ಗುಂಪು ಹಿಂದೂ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಬೆದರಿಕೆ ಹಾಕಿದೆ. ಅಲ್ಲದೆ, ಓರ್ವ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದು, ಶಿವಮೊಗ್ಗದಲ್ಲಿ ಪ್ರಕ್ಷ್ಯುಬ್ಧ ವಾತಾವರಣ ನಿರ್ಮಾಣಗೊಂಡಿದೆ.

    2022ರ ಫೆ.20ರ ರಾತ್ರಿ ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಹರ್ಷನ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಶಿವಮೊಗ್ಗದಲ್ಲಿ ಅಕ್ಷರಶಃ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಶಿವಮೊಗ್ಗ ಬಂದ್​ ಮಾಡಿ ಹರ್ಷನ ಸಾವಿಗೆ ನ್ಯಾಯ ಬೇಕೆಂದು ಹಲವು ಸಂಘಟನೆಗಳು ಮತ್ತು ಸಾರ್ವಜನಿಕರು ಬೀದಿಗಿಳಿದು ಹೋರಾಟ ಮಾಡಿದ್ದರು. ಹರ್ಷನ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಲಾಗಿದೆ. ಪರಿಸ್ಥಿತಿ ತಣ್ಣಗಾಗಿದೆ ಎಂದು ಜನ ನಿಟ್ಟುಸಿರು ಬಿಟ್ಟಿದ್ದರು. ಆದರೀಗ ಮತ್ತೆ ದುಷ್ಕರ್ಮಿಗಳ ಗುಂಪೊಂದು ಪುಂಡಾಟ ಮೆರೆದಿದೆ.

    ನಿನ್ನೆ(ಸೋಮವಾರ) ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ನಲ್ಲಿ ಕೂಗುತ್ತಾ ಓಡಾಡಿದ ಅನ್ಯಕೋಮಿನ ಯುವಕರ ಗುಂಪು, ಹರ್ಷನ ಮನೆ ಬಳಿ ಬೈಕ್ ನಿಲ್ಲಿಸಿ ಹರ್ಷ‌‌ನ ಸಹೋದರಿ ಹಾಗೂ ಕುಟುಂಬ್ಥರಿಗೆ ಬೆದರಿಕೆ ಹಾಕಿದೆ. ಬಳಿಕ ಬೈಕ್​ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳೀಯ ಯುವಕರು ದುಷ್ಕರ್ಮಿಗಳನ್ನು ಹಿಂಬಾಲಿಸಿದ್ದರಾದರೂ ಅಷ್ಟರಲ್ಲಾಗಲೇ ಪರಾರಿಯಾಗಿದ್ದರು. ಪರಾರಿಯಾಗುವ ವೇಳೆ ಭರಮಪ್ಪ ನಗರದಲ್ಲಿ ಪ್ರಕಾಶ್ ಎಂಬ ಯುವಕನಿಗೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಪ್ರಕಾಶ್​ಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಎಸ್​ಪಿ ಮಿಥುನ್ ಕುಮಾರ್, ಮುಂಜಾಗ್ರತಾ ಕ್ರಮವಾಗಿ ಸೀಗೆಹಟ್ಟಿ ಭಾಗದಲ್ಲಿ ಪೊಲೀಸ್​ ಬಂದೋಬಸ್ತ್​ ಮಾಡಿದ್ದಾರೆ.

    ಬ್ರಿಟನ್​ ಪ್ರಧಾನಿಯಾಗಿ ಇನ್ಫಿ ಅಳಿಯ ರಿಷಿ ಸುನಕ್​ ಆಯ್ಕೆ

    ಹಾರ್ಲೆ ಡೆವಿಡ್ಸನ್​ ಬೈಕ್​ ಓಡಿಸಿ ಬೇಬಿ ಬಂಪ್​ ಫೋಟೋಶೂಟ್ ಮಾಡಿಸಿಕೊಂಡ ಮಲೆನಾಡ ಬೆಡಗಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts