

ಹೊಳೆಹೊನ್ನೂರು: ಕ್ಯಾನರ್ ಕಾಯಿಲೆ ಹೆಚ್ಚಾಗುತ್ತಿರುವುದು ಆತಂಕಕಾರಿ ಎಂದು ಆಗರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಯಶವಂತ್ ಹೇಳಿದರು.
ಸಮೀಪದ ಅರಹತೊಳಲಿನಲ್ಲಿ ಶಿವಮೊಗ್ಗದ ಮಲ್ನಾಡ್ ಸಮಾಜ ಸೇವಾ ಸಂಸ್ಥೆ, ತಾಲೂಕು ಅರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಘಟಕದಿಂದ ಏರ್ಪಡಿಸಿದ್ದ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ಆರಂಭದಲ್ಲೆ ಕ್ಯಾನ್ಸರ್ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಪಡೆದರೆ ಸಂಪೂರ್ಣ ಗುಣಮುಖ ಹೊಂದಬಹುದು. ಉತ್ತಮ ಆಹಾರ ಸೇವನೆ ಮತ್ತು ಜೀವನಶೈಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಕಾಯಿಲೆಗಳಿಗೆ ಆಧುನಿಕ ಚಿಕಿತ್ಸಾ ಸೌಲಭ್ಯ ದೊರೆಯುತ್ತದೆ. ಜನರು ಆತಂಕಪಡುವ ಅಗತ್ಯ ಇಲ್ಲ. ಅನಾರೋಗ್ಯ ಲಕ್ಷಣ ಕಂಡುಬಂದಲ್ಲಿ ತಕ್ಷಣ ತಜ್ಞರಲ್ಲಿ ಪರೀಕ್ಷಿಸಿಕೊಳ್ಳಬೇಕು ಎಂದರು. ಗ್ರಾಪಂ ಅಧ್ಯಕ್ಷೆ ನಾಗವೇಣಿ, ಪಿಡಿಒ ಅನಿತಾ, ಅಶೋಕ್, ಗೋವರ್ಧನ್, ಕಿರಣ್, ಪ್ರಭಾಕರ್, ಮಂಜುನಾಥ, ಶಕುಂತಲಾ, ನಾಗವೇಣಿ, ಎಂ.ರಂಗನಾಥ್, ಲಕ್ಷ್ಮೀ ಇತರರಿದ್ದರು.