More

    ಹೊಳಲೂರಿನಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ

    ಶಿವಮೊಗ್ಗ: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಸಜ್ಜಾಗಿದ್ದ ತಾಲೂಕಿನ ಹೊಳಲೂರು ಜನತೆಗೆ ಅಂತಿಮ ಕ್ಷಣದಲ್ಲಿ ಪ್ರಧಾನಿ ಕಾರ್ಯಕ್ರಮ ರದ್ದಾದ ಪರಿಣಾಮ ನಿರಾಸೆ ಕಾಡಿತ್ತು. ಈಗ ಮತ್ತೆ ಅಲ್ಲಿನ ಗ್ರಾಮಸ್ಥರಲ್ಲಿ ಸಂತಸ ಮನೆ ಮಾಡಿದೆ. ಇದಕ್ಕೆ ಕಾರಣ ಈ ತಿಂಗಳು ಕಂದಾಯ ಸಚಿವ ಆರ್.ಅಶೋಕ್ ಹೊಳಲೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿರುವುದು.
    ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಭಾಗವಾಗಿ ಜ.28ರಂದು ಕಂದಾಯ ಸಚಿವ ಆರ್.ಅಶೋಕ್, ಅಧಿಕಾರಿಗಳೊಂದಿಗೆ ಹೊಳಲೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದಿಂದ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಅಧಿಕಾರಿಗಳು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
    ಕಂದಾಯ ಸಚಿವರ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ತಹಸೀಲ್ದಾರ್ ಡಾ.ನಾಗರಾಜ್, ಕಾರ್ಯಕ್ರಮದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದರು.
    ವಾಹನಗಳ ಪಾರ್ಕಿಂಗ್, ಭದ್ರತೆ, ಫಲಾನುಭವಿಗಳಿಗೆ, ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಗ್ರಾಮಸ್ಥರಿಗೆ ಪ್ರತ್ಯೇಕ ಆಸನದ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಈಗಾಗಲೇ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪ್ರಸ್ತಾಪವಾದ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
    ಸಭೆಯಲ್ಲಿ ಡಿವೈಎಸ್ಪಿ ಸುರೇಶ್, ಉಪತಹಸೀಲ್ದಾರ್ ಗಣೇಶ್ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
    ಕಟ್ಟಡಗಳಿಗೆ ಹಿಂದೆಯೇ ಸುಣ್ಣ-ಬಣ್ಣ!
    ಹೊಳಲೂರಿನ ಸರ್ಕಾರಿ ಆಸ್ಪತ್ರೆ, ಗ್ರಂಥಾಲಯ, ಗ್ರಾಪಂ ಕಟ್ಟಡಕ್ಕೆ ಕಳೆದ ಏಪ್ರಿಲ್‌ನಲ್ಲಿಯೇ ಸುಣ್ಣ-ಬಣ್ಣ ಹಚ್ಚಲಾಗಿತ್ತು. 2022ರ ಏಪ್ರಿಲ್ 24ರಂದು ಹೊಳಲೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಂಚಾಯತ್‌ರಾಜ್ ದಿವಸ್‌ನಲ್ಲಿ ಭಾಗವಹಿಸಲಿದ್ದಾರೆ ಎಂಬ ಕಾರಣದಿಂದ ಅನೇಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಅಧಿಕಾರಿಗಳು ಮೂರು ತಿಂಗಳಿಗೂ ಹೆಚ್ಚು ಕಾಲ ಸಿದ್ಧತೆಗಳನ್ನು ಮಾಡಿಕೊಂಡು ಪ್ರಧಾನಿ ಆಗಮನದ ನಿರೀಕ್ಷೆಯಲ್ಲಿದ್ದರು. ಆದರೆ ಅಂತಿಮ ಸಂದರ್ಭದಲ್ಲಿ ಪ್ರಧಾನಿ ಕಾರ್ಯಕ್ರಮ ರದ್ಧಾಗಿತ್ತು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts