ಗುರುಗಳ ಮಾರ್ಗದರ್ಶನವಿದ್ದರೆ ಭವಿಷ್ಯ ಉಜ್ವಲ

02sor2
ಸೊರಬ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಎಸ್.ಮಂಜುನಾಥ್, ನಾಗರಾಜ್ ಜೈನ್, ಎಂ.ಸುರೇಶಪ್ಪ ಇತರರಿದ್ದರು.
Published on

ಸೊರಬ: ವಿದ್ಯಾರ್ಥಿಗಳು ಕಲಿಕೆ ಹಂತದಲ್ಲಿ ಗುರುಗಳಿಂದ ಸೂಕ್ತ ಮಾರ್ಗದರ್ಶನ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಮಂಜುನಾಥ್ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಪರಿಶ್ರಮ ಪಡುವ ಜತೆಗೆ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಾಧನೆಗಳಿಗೆ ಸಮಾಜದಲ್ಲಿ ಗೌರವವಿದ್ದು, ಪಾಲಕರ ಕನಸನ್ನು ಮಕ್ಕಳು ನನಸು ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಡಿಸಿ ಉಪಾಧ್ಯಕ್ಷ ನಾಗರಾಜ್ ಜೈನ್, ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕ ವ್ಯವಸ್ಥೆ ರೂಪಿಸಲಾಗಿದೆ. ಮಕ್ಕಳಿಗೆ ಕಾಲೇಜಿನಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪೈಪೋಟಿ ನೀಡುವಂತೆ ಬೆಳವಣಿಗೆ ಹೊಂದುತ್ತಿರುವುದು ಸಂತಸದ ಸಂಗತಿ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ 45 ಲಕ್ಷ ರೂ. ವಿಶೇಷ ಅನುದಾನ ಬಿಡುಗಡೆಗೊಳಿಸಿ ಕಾಲೇಜಿನ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿನ ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಬೇಕು. ಪಾಲಕರು, ಶಿಕ್ಷಕರು ಹಾಗೂ ಉಪನ್ಯಾಸಕರ ನಡುವೆ ಉತ್ತಮ ಸಮನ್ವಯ ಇದ್ದರೆ ಕಾಲೇಜಿಗೆ ಉತ್ತಮ ಲಿತಾಂಶ ಲಭಿಸುತ್ತದೆ. ಎಂ.ಸುರೇಶಪ್ಪ ಪ್ರಾಚಾರ್ಯ

ಎಸ್.ಮಂಜುನಾಥ್, ಜಿಪಂ ಇಂಜಿನಿಯರ್ ಗಣಪತಿ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಬಹುಮಾನ ನೀಡಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವೀರೇಶ್ ಶಿಗ್ಗಾ, ಪುಷ್ಪಾ, ವಿಜೇಂದ್ರ, ರಾಜು ಹಿರಿಯಾವಲಿ, ಉಪನ್ಯಾಸಕ ವೈ.ರವಿ, ಬಸವರಾಜು, ಡಾ.ಉಮೇಶ್, ಶಶಿಕಲಾ, ಭರತ್‌ಕುಮಾರ್, ಕೆ.ಮಂಜುನಾಥ್, ನೀಲಕಂಠಪ್ಪ, ಶರಾವತಿ, ನಯನಾ, ವಸಂತ್, ಪ್ರಜ್ವಲ್, ರೇವಣಪ್ಪ, ಧರ್ಮನಾಯ್ಕ, ಟಿ.ಜಿ.ಪರಶುರಾಮಪ್ಪ, ಚಿದಾನಂದ ಗೌಡ, ವಿಜಯ್ ದಟ್ಟೇರ್, ಮಲ್ಲೇಶಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net