ತಂಬಾಕುಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

31sor1
ಸೊರಬದಲ್ಲಿ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ರಾಜು ಕೆ. ಶೇಡ್‌ಬಾಳ್ಕರ್, ಎಂ.ಆರ್.ಪಾಟೀಲ್, ಮಂಜುಳಾ ಹೆಗಡಾಳ್, ಡಾ. ನೂತನ್ ನಾಯ್ಕ ಇತರರಿದ್ದರು.
Published on

ಸೊರಬ: ಸಮಾಜಕ್ಕೆ ಮಾರಕವಾಗಿರುವ ತಂಬಾಕು ಸೇವನೆಯಿಂದ ಆಗುವ ಅಪಾಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಿವಿಲ್ ನ್ಯಾಯಾಧೀಶ ರಾಜು ಕೆ. ಶೇಡ್‌ಬಾಳ್ಕರ್ ಹೇಳಿದರು.

ಸೊರಬ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ವಕೀಲರ ಸಂಘದಿಂದ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಗುಲಾಬಿ ಆಂದೋಲನ ಹಾಗೂ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಂಬಾಕುಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ಕೈಜೋಡಿಸಬೇಕು. ತಂಬಾಕು ಸೇವನೆಯಿಂದ ಆರೋಗ್ಯವಲ್ಲದೆ, ಸಾಮಾಜಿಕ ಸ್ವಾಸ್ಥೃ ಹಾಳಾಗುತ್ತದೆ. ಇದನ್ನು ತಡೆಗಟ್ಟಲು ಜನತೆ ಮುಂದಾಗಬೇಕು ಎಂದು ತಿಳಿಸಿದರು.

ಹಿರಿಯ ವಕೀಲ ಎಂ.ಆರ್.ಪಾಟೀಲ್ ಮಾತನಾಡಿ, ಸಮಾಜದಲ್ಲಿ ಹಾನಿಕಾರಕ ವಸ್ತುಗಳ ಸೇವನೆಯಿಂದ ಸಾಮಾಜಿಕ ಸ್ವಾಸ್ಥೃ ಹಾಳಾಗುತ್ತಿದೆ. ಇಂತಹ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲು ಸರ್ಕಾರ ಮುಂದಾಗಬೇಕು ಎಂದರು.

ತಹಸೀಲ್ದಾರ್ ಮಂಜುಳಾ ಹೆಗಡಾಳ್ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಟಿ.ಎಚ್.ನೂತನ್ ನಾಯ್ಕ, ಬಿಇಒ ಆರ್.ಪುಷ್ಪಾ, ಶಬ್ಬೀರ್ ಖಾನ್, ವಕೀಲ ಡಾಕಪ್ಪ, ಆರೋಗ್ಯ ಇಲಾಖೆ ಸಿಬ್ಬಂದಿ, ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net