More

    ಕಾರ್ಮಿಕರು ಸೌಲಭ್ಯಗಳ ಮಾಹಿತಿ ಪಡೆಯಲಿ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿಯೇ ಸಂಘ ಸ್ಥಾಪಿಸಲಾಗಿದೆ. ಕಟ್ಟಡ ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದಿಂದ ಸಾಲ ಸೌಲಭ್ಯಗಳನ್ನೂ ನೀಡಲಾಗುತ್ತದೆ. ತಮಗೆ ದೊರೆಯುವ ಸೌಲಭ್ಯಗಳ ಬಗ್ಗೆ ಕಾರ್ಮಿಕರು ಅವಶ್ಯಕ ಮಾಹಿತಿ ಹೊಂದಬೇಕೆಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
    ಶಿವಮೊಗ್ಗ ಕಟ್ಟಡ ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘ, ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸಂಯುಕ್ತಾಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರ ಸಂಘಟನೆಗಳ ನಾಯಕರು ಸವಲತ್ತುಗಳ ಬಗ್ಗೆ ಕಾರ್ಮಿಕರಲ್ಲಿ ಅರಿವು ಮೂಡಿಸಬೇಕೆಂದರು.
    ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಲ್ಲಿ ನೋಂದಾಯಿತರಾದ ಲಾನುಭವಿಗಳು ಹಾಗೂ ಅವರ ಮಕ್ಕಳಿಗೆ ಸರ್ಕಾರ ಅನೇಕ ಸೌಲಭ್ಯ ನೀಡುತ್ತಿದೆ. ಉಚಿತ ಸಾಮೂಹಿಕ ಮದುವೆ ಎಂದರೆ ಬಡವರಿಗೆ ಅದೊಂದು ವರದಾನ. ಇಲ್ಲಿ ವಿವಾಹವಾಗುವ ಜೋಡಿಗೆ ಕಾರ್ಮಿಕ ನಿಧಿಯಿಂದ ಸರ್ಕಾರ 40 ಸಾವಿರ ರೂ. ನೀಡುತ್ತದೆ. ಸೌಹರ್ದ ಸಹಕಾರಿ ಸಂಘದಿಂದ ತಾಳಿ, ಕಾಲುಂಗುರ ಮತ್ತು ಊಟದ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
    ಸರ್ದಾರ್ ಸೇವಾಲಾಲ್ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮೇಯರ್ ಎಸ್.ಶಿವಕುಮಾರ್, ಸೂಡಾ ಅಧ್ಯಕ್ಷ ನಾಗರಾಜ್, ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಪ್ರಮುಖರಾದ ಡಾ.ಶಾಂತಾ ಸುರೇಂದ್ರ, ಆರ್.ವಾಸುದೇವನ್, ಕೆ.ಮುರುಗನ್, ಎನ್.ಡಿ.ಸತೀಶ್, ಎಸ್.ದತ್ತಾತ್ರಿ, ಪಳನಿ ಮುಂತಾದವರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts