More

    ಲಕ್ಷಾಂತರ ಕುಟುಂಬಗಳಿಗೆ ಧರ್ಮಸ್ಥಳ ಸಂಘ ದಾರಿದೀಪ

    ಶಿವಮೊಗ್ಗ: ಮದ್ಯವ್ಯಸನದಿಂದ ಇಡೀ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದ ಜನರನ್ನು ವ್ಯಸನ ಮುಕ್ತರನ್ನಾಗಿಸುವ ಮೂಲಕ ಲಕ್ಷಾಂತರ ಕುಟುಂಬಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ದಾರಿ ದೀಪವಾಗಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
    ನಗರದ ಕಂಟ್ರಿಕ್ಲಬ್ ರಸ್ತೆಯ ಚೈತನ್ಯಸೌಧದಲ್ಲಿ ಶನಿವಾರ ಶಿವಮೊಗ್ಗ ಜಿಲ್ಲಾ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಧರ್ಮಸ್ಥಳದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ, ಆಶ್ರಯದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ ನಿಮಿತ್ತ ಗಾಂಧಿಸ್ಮತಿ ಮತ್ತು ದುಶ್ಚಟಗಳ ವಿರುದ್ಧದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
    ಮದ್ಯವು ಕೇವಲ ವ್ಯಸನಿಗಳನ್ನು ಮಾತ್ರ ಹಾಳು ಮಾಡುವುದಿಲ್ಲ. ಬದಲಿಗೆ ಅವರ ಸುತ್ತಮುತ್ತಲಿನ ಪರಿಸರವನ್ನೂ ಹಾಳುಗೆಡವುತ್ತದೆ. ಎಷ್ಟೋ ಮಂದಿ ಮದ್ಯದ ದಾಸರಾಗಿ ಮನೆ-ಮಠಗಳನ್ನೂ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಮದ್ಯವ್ಯಸನಿಗಳ ಸಂಖ್ಯೆ ದಿನದಿಂದ ಹೆಚ್ಚಾಗುತ್ತಲೂ ಇದೆ. ಇಂತಹ ಸಂದರ್ಭದಲ್ಲಿ ಮದ್ಯವರ್ಜನ ಶಿಬಿರಗಳ ಲಕ್ಷಾಂತರ ಜನರನ್ನು ವ್ಯಸನದಿಂದ ಮುಕ್ತಗೊಳಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.
    ವೇದಿಕೆ ಅಧ್ಯಕ್ಷ ಜಿ.ಆನಂದಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಮಹಾನಗರ ಪಾಲಿಕೆ ಸದಸ್ಯೆ ಯಮುನಾ ರಂಗೇಗೌಡ, ಜನ ಜಾಗೃತಿ ಸಮಿತಿ ಸದಸ್ಯ ಉದಯಕುಮಾರ್ ಶೆಟ್ಟಿ, ಶಿವಮೊಗ್ಗ ಜಿಲ್ಲಾ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನ ಹಿರಿಯ ನಿರ್ದೇಶಕ ಜೆ.ಚಂದ್ರಶೇಖರ್, ಸೂಡಾ ಅಧ್ಯಕ್ಷ ಎನ್.ಜೆ.ರಾಜಶೇಖರ್, ಪಾಲಿಕೆ ಸದಸ್ಯರಾದ ಪಿ.ಪ್ರಭಾಕರ್, ಇ.ವಿಶ್ವಾಸ್, ವೇದಿಕೆ ಸದಸ್ಯ ರಮೇಶ್, ಯೋಜನಾಧಿಕಾರಿಗಳಾದ ರೂಪಾ, ಉಮೇಶ್, ರಾಜೇಂದ್ರ ಉಪಸ್ಥಿತರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts