More

    ಕೌಟುಂಬಿಕ ವ್ಯವಸ್ಥೆ ಪರಿಚಯಿಸಿದ ರಾಮಾಯಣ: ಶಾಸಕ ಈಶ್ವರಪ್ಪ ಬಣ್ಣನೆ

    ಶಿವಮೊಗ್ಗ: ಭಾರತೀಯ ಸಂಸ್ಕೃತಿಯ ಕೌಟುಂಬಿಕ ವ್ಯವಸ್ಥೆಯನ್ನು ಮಹರ್ಷಿ ವಾಲ್ಮೀಕಿ ರಾಮಾಯಣದಲ್ಲಿ ಮಾತ್ರ ಕಾಣಲು ಸಾಧ್ಯವಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಬಣ್ಣಿಸಿದರು.
    ಕುವೆಂಪು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
    ವಾಲ್ಮೀಕಿ ಬರೆದ ರಾಮಾಯಾಣ ಭಾರತಕ್ಕೆ ಮಾತ್ರ ಮಹತ್ವವಲ್ಲ. ಅದರ ಮಹತ್ವ ವಿಶ್ವದಾದ್ಯಂತ ವ್ಯಾಪಿಸಿದೆ. ಅದೇ ರೀತಿ ಮಹರ್ಷಿಗಳು ಕೇವಲ ವಾಲ್ಮೀಕಿ ಸಮಾಜಕ್ಕೆ ಸೀಮಿತವಾಗಿರದೆ ಎಲ್ಲ ಜಾತಿ, ಧರ್ಮಗಳಿಗೂ ಮೀಸಲಾಗಿದ್ದಾರೆ. ಅವರ ಹೆಸರು ನಮ್ಮ ನಾಲಿಗೆ ಮೇಲೆ ಬಂದರೆ ನಮ್ಮ ಜನ್ಮ ಸಾರ್ಥಕವಾಗುತ್ತದೆ ಎಂದರು.
    ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿಂದ ಅಚರಣೆ ಮಾಡಿದಾಗ ವಾಲ್ಮೀಕಿಗೆ ಗೌರವ ಸಲ್ಲಿಸಿದಂತೆ ಆಗಲಿದೆ. ಜಾತಿ ಬೇಧ ಮರೆತು ಸಮಾಜ ಒಗ್ಗಟ್ಟಾಗಲಿ ಎಂದು ಮಹರ್ಷಿ ವಾಲ್ಮೀಕಿ ಆಶಿಸಿದ್ದರು. ಅದರಂತೆ ಎಲ್ಲರೂ ನಡೆದುಕೊಳ್ಳಬೇಕಿದೆ ಎಂದರು.
    ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ 625 ಅಂಕ ಪಡೆದ ನಯನಾಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಂತರ್‌ಜಾತಿ ವಿವಾಹವಾದ ಮೂರು ಜೋಡಿಗಳಿಗೆ ಸಾಂಕೇತಿಕವಾಗಿ ಪ್ರೋತ್ಸಾಹ ಧನ ನೀಡಲಾಯಿತು. ಮೇಯರ್ ಸುನೀತಾ ಅಣ್ಣಪ್ಪ, ಡಿಸಿ ಡಾ. ಆರ್.ಸೆಲ್ವಮಣಿ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಜಿಪಂ ಸಿಇಒ ಎನ್.ಡಿ.ಪ್ರಕಾಶ್, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾವಿ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನಿರ್ದೇಶಕ ನಾಗರಾಜ್, ಟಿ.ಲೋಕೇಶ್, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಕಾಂಗ್ರೆಸ್ ಮುಖಂಡ ವೈ.ಎಚ್.ನಾಗರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಅಜ್ಜಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾಗರಾಜ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts