ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಬೇಡ

17hos1p tunga
ಹೊಸನಗರದಲ್ಲಿ ಏರ್ಪಡಿಸಿದ್ದ ತುಂಗಾ ಅಡಕೆ ಮಾರಾಟ ಸೌಹಾರ್ದ ಸಹಕಾರ ಸಂಘದ ಸಭೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಆರ್.ಎಂ.ಮಂಜುನಾಥ ಗೌಡ, ವಿದ್ಯಾಧರ್, ಜಗದೀಶ್ ಇತರರಿದ್ದರು.
Published on

ಹೊಸನಗರ: ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಹೆಚ್ಚಿನ ಸೌಲಭ್ಯ ನೀಡುತ್ತಿದ್ದರೂ ಖಾಸಗಿಯಲ್ಲಿ ಅಧಿಕ ಬಡ್ಡಿಗೆ ಸಾಲ ಪಡೆದು ಹಿಂದಿರುಗಿಸಲಾಗದೆ ದುರಂತ ಸಾವಿಗೀಡಾಗುತ್ತಿರುವುದು ಬೇಸರದ ಸಂಗತಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ಎಪಿಎಂಸಿ ಯಾರ್ಡ್ ಆವರಣದಲ್ಲಿ ಏರ್ಪಡಿಸಿದ್ದ ತುಂಗಾ ಅಡಕೆ ಮಾರಾಟ ಸೌಹಾರ್ದ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿ, ರೈತರಿಗೆ ನಬಾರ್ಡ್‌ನಿಂದ 2.75 ಲಕ್ಷ ಕೋಟಿ ರೂ.ಗಳನ್ನು ಸಾಲದ ರೂಪದಲ್ಲಿ ವಿತರಿಸಬೇಕಿತ್ತು. ಡಿಸಿಸಿ ಬ್ಯಾಂಕ್ ರೈತರ ಆಶೋತ್ತರಗಳಿಗೆ ಸ್ಪಂದಿಸಿ ಅಗತ್ಯ ಸಾಲ ಬಿಡುಗಡೆ ಮಾಡಿ ರೈತರಿಗೆ ಬೆಂಬಲವಾಗಿದೆ. ತುಂಗಾ ಸಹಕಾರ ಸಂಘ ಏಳೇ ವರ್ಷಗಳಲ್ಲಿ 42 ಲಕ್ಷ ರೂ. ಲಾಭ ಗಳಿಸಿರುವುದು ಆಶಾದಾಯಕ ಬೆಳವಣಿಗೆ ಎಂದರು.

ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ಮಲೆನಾಡು ಭಾಗದ ಅಡಕೆ ಬೆಳೆಗಾರರು ಕೆಲ ವರ್ಷಗಳಿಂದ ಕೊಳೆ ಹಾಗೂ ಎಲೆಚುಕ್ಕೆ ರೋಗದಿಂದ ಸಾಕಷ್ಟು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದರೂ ಸಂಘದಲ್ಲಿ ಈ ಬಾರಿ ಒಂದು ಕೋಟಿ ರೂ.ಗೂ ಹೆಚ್ಚು ಠೇವಣಿ ಸಂಗ್ರಹವಾಗಿದೆ ಎಂದು ಹೇಳಿದರು.

ಶಿಮುಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ್ ಮಾತನಾಡಿ, ಸಂಘದ ಪ್ರತಿಯೊಬ್ಬರೂ ಆಡಳಿತ ವೈಖರಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡಲ್ಲಿ ಮಾತ್ರವೇ ಸಹಕಾರ ಸಂಘಗಳ ಅಭಿವೃದ್ಧಿ ಸಾಧ್ಯ ಎಂದರು. ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಶಿಮುಲ್ ನಿರ್ದೇಶಕ ಜಗದೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎನ್.ಸುಧೀರ್ ಕುಮಾರ್, ಸಹಕಾರ ಸಂಘದ ಅಧ್ಯಕ್ಷ ದುಮ್ಮ ವಿನಯ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net