More

    ಶಿವಮೊಗ್ಗ: ಕುವೆಂಪು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ನಿಯಮಾವಳಿಗಳನ್ನು ಪಾಲಿಸಿಲ್ಲ. ಹಾಲಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಂಡಿರುವುದು ಪ್ರಮುಖ ಲೋಪವಾಗಿದೆ. ನೇಮಕಾತಿ ಅಧಿಸೂಚನೆ ಹೊರಡಿಸಿ ಹೊಸದಾಗಿ ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಎನ್‌ಎಸ್‌ಯುಐ ಪದಾಧಿಕಾರಿಗಳು ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
    ಪ್ರತಿ ವರ್ಷ ನೇಮಕಾತಿಗೆ ಅಧಿಸೂಚನೆ ಹೊರಡಿಸಿಯೇ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು. ಇದರಿಂದ ಅವಕಾಶ ವಂಚಿತರಿಗೆ ಅನುಕೂಲವಾಗುತ್ತದೆ. ಕರೊನಾ ಅವಧಿಯಲ್ಲಿ ಎರಡು ವರ್ಷ ಅಧಿಸೂಚನೆ ಹೊರಡಿಸಿರಲಿಲ್ಲ. ಈಗಲೂ ಅದೇ ಪರಿಪಾಠ ಮುಂದುವರಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
    ವಿವಿಯ ಈ ನಿರ್ಧಾರದಿಂದ ನೆಟ್, ಸ್ಲೆಟ್, ಪಿಎಚ್‌ಡಿ ಪದವೀಧರ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ಹಾಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರನ್ನೇ ಮುಂದುವರಿಸಿರುವುದರಿಂದ ವಿವಿಯಲ್ಲಿ ಹಣದ ವ್ಯವಹಾರ ನಡೆದಿರುವ ಬಗ್ಗೆಯೂ ಅನುಮಾನಗಳಿವೆ. ಕೂಡಲೇ ನೇಮಕಾತಿಗೆ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿದರು.
    ಮನವಿ ಸಲ್ಲಿಸುವ ಸಂದರ್ಭದಲ್ಲಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಶಿವಮೊಗ್ಗ ನಗರಾಧ್ಯಕ್ಷ ಚರಣ್, ಭದ್ರಾವತಿ ತಾಲೂಕು ಉಪಾಧ್ಯಕ್ಷ ಕೀರ್ತಿ ಮುಂತಾದವರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts