ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

5 RPT 1
ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿ ಬಿಳಿಕಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿದರು. ಜಯಪ್ರಕಾಶ್ ಶೆಟ್ಟಿ, ಸುಧಾಕರ, ರಾಜು, ವೆಂಕಟಾಚಲ ಇತರರಿದ್ದರು.
Published on

ರಿಪ್ಪನ್‌ಪೇಟೆ: ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಸಮೀಪದ ಕೋಡೂರು ಮತ್ತು ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಗಳ ವಿವಿಧ ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಮುತ್ತಲ, ಬುಲ್ಡೇಜರ್‌ಗುಡ್ಡ, ಸಿದ್ಧಗಿರಿ, ದಡಪೆಸರ, ಬಿಳಿಕಿ ರಸ್ತೆಗಳ ಕಾಮಗಾರಿಗೆ 70 ಲಕ್ಷ ರೂ. ಅನುದಾನ ಬಿಡುಗಡೆ ಆಗಿದ್ದು, ಜನರಿಗೆ ಅಗತ್ಯ ರಸ್ತೆ ಸೌಕರ್ಯ ಒದಗಿಸಲಾಗುವುದು. ಹಂತ ಹಂತವಾಗಿ ಕ್ಷೇತ್ರದಲ್ಲಿನ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ದೇವಸ್ಥಾನ, ಶಾಲೆ, ಸೇತುವೆ, ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ಕ್ಷೇತ್ರದ ಅಭಿವೃದ್ಧಿ ನನ್ನ ಆದ್ಯತೆಯಾಗಿದ್ದು, ಸಾರ್ವಜನಿಕರು ಸಲಹೆಗಳನ್ನು ನೀಡುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು. ಕಾಮಗಾರಿ ನಿರ್ಮಾಣದಲ್ಲಿ ಗ್ರಾಮಸ್ಥರು ಮತ್ತು ಸರ್ಕಾರಿ ಅಧಿಕಾರಿಗಳು ಗಮನಹರಿಸಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದರು.

ಕೋಡೂರು ಗ್ರಾಪಂ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷ ಸುಧಾಕರ, ಜೇನಿ ಗ್ರಾಪಂ ಅಧ್ಯಕ್ಷ ರಾಜು, ಸದಸ್ಯರಾದ ವೆಂಕಟಾಚಲ, ಅರುಣಾಚಲ, ಪಿಡಿಒ ನಾಗರಾಜ, ಮಂಜುಳಾ, ಮುಖಂಡರಾದ ಕಲಗೋಡು ರತ್ನಾಕರ, ಚಂದ್ರಮೌಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net