

ಸೊರಬ: ಕನ್ನಡ ನಾಡು, ನುಡಿ ಸೇವೆ ಮಾಡುವ ನಿಟ್ಟಿನಲ್ಲಿ ಗ್ರಾಮ ಗ್ರಾಮಗಳಲ್ಲಿ ಸಂಘಟನೆ ಮಾಡಲಾಗುವುದು ಎಂದು ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ಅಧ್ಯಕ್ಷ ಮಂಜುನಾಥ್ ಉಪ್ಪಳ್ಳಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ಪದಾಧಿಕಾರಿಗಳ ಆಯ್ಕೆ ಮತ್ತು ಪದಗ್ರಹಣ ಸಭೆಯಲ್ಲಿ ಸಂಘಟನೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿ, ಕನ್ನಡ ನಾಡು, ನುಡಿ, ಜಲದ ವಿಷಯದಲ್ಲಿ ಒಗ್ಗೂಡಿ ಕೆಲಸ ಮಾಡಲು ಬದ್ಧರಿದ್ದು, ಸಂಘಟನೆ ಮೂಲಕ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.
ಜಿಲ್ಲಾ ಗೌರವಾಧ್ಯಕ್ಷ ಪ್ರವೀಣ್ ಹಿರೇಇಡಗೋಡು ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಅಪ್ಪು ಸೇನೆಯಿಂದ ಕನ್ನಡಪರ ಕೆಲಸಗಳ ಜತೆಗೆ ಸಮಾಜಸೇವೆ, ರಕ್ತದಾನ ಶಿಬಿರ, ವನಮಹೋತ್ಸವ, ರೋಗಿಗಳಿಗೆ ಸಹಾಯಹಸ್ತ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಪದಾಧಿಕಾರಿಗಳಾಗಿ ತಾಲೂಕು ಗೌರವಾಧ್ಯಕ್ಷ ಲಕ್ಷ್ಮಣಪ್ಪ, ಖಜಾಂಚಿ ಚಿದಾನಂದ, ಪ್ರಧಾನ ಕಾರ್ಯದರ್ಶಿ ಭರತ್, ಸಂಘಟನಾ ಕಾರ್ಯದರ್ಶಿ ಪ್ರದೀಪ್, ಯುವ ಘಟಕದ ಅಧ್ಯಕ್ಷ ಸ್ವರೂಪ್, ನಗರ ಘಟಕದ ಅಧ್ಯಕ್ಷ ಪ್ರಜ್ವಲ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಕಿಶೋರ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಸುರೇಂದ್ರ, ಉಳವಿ ಹೋಬಳಿ ಘಟಕದ ಅಧ್ಯಕ್ಷ ರಮೇಶ್, ಸಂಘಟನಾ ಕಾರ್ಯದರ್ಶಿ ನಾಗಪ್ಪ, ದಾನಶೇಖರ ಪ್ರಮಾಣ ಪತ್ರ ಸ್ವೀಕರಿಸಿದರು. ಕಾರ್ಯಕರ್ತರು ಉಪಸ್ಥಿತರಿದ್ದರು.