ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಿ

3 hhr mahile
ಹೊಳೆಹೊನ್ನೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನದಲ್ಲಿ ಶಶಿರೇಖಾ, ಪೀಟರ್ ಸಿ. ಸೆರಾವ್, ಡಾ. ಕಲ್ಪನಾ ಇತರರಿದ್ದರು.
Published on

ಹೊಳೆಹೊನ್ನೂರು: ಲಿಂಗಾನುಪಾತದ ಅಂತರ ಕಡಿಮೆ ಮಾಡುವುದು, ಮಹಿಳಾ ಸಬಲೀಕರಣ ಮತ್ತು ಲಿಂಗ ಅಸಮಾನತೆ ತೆಗೆದುಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ಜಾರಿಗೊಳಿಸಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ ಹೇಳಿದರು.

ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಆಡಳಿತ, ತಾಪಂ, ತಾಲೂಕು ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಪಂ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ದಶಮಾನೋತ್ಸವ ಕಾರ್ಯಕ್ರಮದಡಿ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ ಉಪನ್ಯಾಸ ಕಾರ್ಯಾಗಾರ, ತಾಲೂಕು ಮಟ್ಟದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯೋಜನೆ ಮೂಲಕ ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಲು, ಸಮಾಜದಲ್ಲಿ ಭಾಗವಹಿಸುವಿಕೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ವರದಕ್ಷಿಣೆ ಮತ್ತು ಬಾಲ್ಯವಿವಾಹ ನಿಷೇಧಿಸುವುದು ಮತ್ತು ಸರಳ ವಿವಾಹ ಪ್ರೋತ್ಸಾಹಿಸುವುದು ನಮ್ಮೆಲರ ಜವಾಬ್ದಾರಿ ಎಂದು ತಿಳಿಸಿದರು.

ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ ಕುರಿತು ಉಪನ್ಯಾಸಕ ಪೀಟರ್ ಸಿ. ಸೆರಾವ್, ಉಪನ್ಯಾಸಕಿ ಡಾ. ಕಲ್ಪನಾ ಉಪನ್ಯಾಸ ನೀಡಿದರು. ಮೇಲ್ವಿಚಾರಕಿ ಸೌಮ್ಯಾ, ಶಾಂತಕುಮಾರಿ, ನಾಗರತ್ನಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net