ಸಾಗರ: ಆರಂಭಿಕ ಹಂತದಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರ ಜತೆ ಪಾಲಕರು, ಶಾಲಾಭಿವೃದ್ಧಿ ಸಮಿತಿ ಮತ್ತು ದಾನಿಗಳು ಕೈಜೋಡಿಸಬೇಕು ಎಂದು ನಗರಸಭೆ ಸದಸ್ಯ ಎಲ್.ಚಂದ್ರಪ್ಪ ಹೇಳಿದರು.
ಶ್ರೀಧರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಉಚಿತ ಬ್ಯಾಗ್‌ಗಳನ್ನು ಮಕ್ಕಳಿಗೆ ನೀಡಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿವೆ. ಮಕ್ಕಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಬೇಕು ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ನೀಡಿದರೆ, ರಾಜ್ಯ ಸರ್ಕಾರ ಮಧ್ಯಾಹ್ನದ ಬಿಸಿಯೂಟ, ಸಮವಸ, ಪುಸ್ತಕ, ಮೊಟ್ಟೆ ಸೇರಿ ಇತರ ಸವಲತ್ತು ನೀಡುತ್ತಿದೆ ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚರಂತಯ್ಯ ಸ್ವಾಮಿ, ಎನ್.ವೆಂಕಟೇಶ್, ಗಣೇಶ ಪೂಜಾರಿ, ವಾಣಿ, ಸುಮಿತ್ರಾ ಇತರರಿದ್ದರು.
ನೆಲ್ಲಿಕೊಪ್ಪ ಗ್ರಾಮದಲ್ಲಿ ಗ್ರಾಮ ದೇವರು ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ