

ಸಾಗರ: ಆರೋಗ್ಯಕ್ಕೆ ಸಂಬಂಧಿಸಿದ ಯೋಜನೆಗಳಿಗೆ ರಾಜ್ಯ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದ್ದು, ನಮ್ಮ ಕ್ಲಿನಿಕ್ ಆರೋಗ್ಯ ಸೇವೆಗೆ ಪೂರಕ ಘಟಕ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ನಗರದ ನೆಹರು ನಗರದಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿ, ನಗರವ್ಯಾಪ್ತಿ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಹಕಾರ ನೀಡಿವೆ ಎಂದು ತಿಳಿಸಿದರು.
ನಮ್ಮ ಕ್ಲಿನಿಕ್ ಬೆಳಗ್ಗೆ 9ರಿಂದ ಸಂಜೆ 4.30ರವರೆಗೆ ಕಾರ್ಯನಿರ್ವಹಿಸಲಿದ್ದು, ಗರ್ಭಿಣಿಯರು, ಮಕ್ಕಳು, ಬಾಣಂತಿಯರನ್ನು ತಪಾಸಣೆಗೆ ಒಳಪಡಿಸಲಾಗುತ್ತದೆ. ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಯೋಗಾಲಯದಲ್ಲಿ ರಕ್ತ ಪರೀಕ್ಷೆ ಮಾಡಲಾಗುತ್ತದೆ ಎಂದರು.
ದಿನೇಶ್ ಗುಂಡೂರಾವ್ ಸಚಿವರಾದ ಮೇಲೆ ಆರೋಗ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಸಾಗರದ ಉಪವಿಭಾಗೀಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಅಗತ್ಯ ಅನುದಾನ ನೀಡುತ್ತಿದ್ದಾರೆ ಎಂದು ತಿಳಿಸಿದರು. ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಮಧುಮಾಲತಿ, ಗಣಪತಿ ಮಂಡಗಳಲೆ, ಜಾಕೀರ್, ಡಿಎಚ್‌ಒ ಡಾ. ನಟರಾಜ್, ಮಲ್ಲಪ್ಪ ಇತರರಿದ್ದರು.