More

    ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಸೈನ್ಸ್ ಮ್ಯೂಸಿಯಂ: ಬಿವೈಆರ್

    ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಲ್ಲಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ ಆರಂಭಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರಿಂದ ವಿಜ್ಞಾನ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯೋಜನವಾಗಲಿದೆ.
    ಆರಂಭದಲ್ಲಿ ಕೆಟಗರಿ-2 ವಿಭಾಗದ ಸೈನ್ಸ್ ಮ್ಯೂಸಿಯಂ ನಿರ್ಮಾಣವಾಗಲಿದೆ. ಕ್ರಮೇಣ ಇದನ್ನು ಕೆಟಗರಿ-1ಕ್ಕೆ ಏರಿಸುವ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಸೈನ್ಸ್ ಮ್ಯೂಸಿಯಂಗೆ ಕೇಂದ್ರ ಸರ್ಕಾರ 6.55 ಕೋಟಿ ರೂ. ಹಾಗೂ ರಾಜ್ಯ ಸರ್ಕಾರ 8.65 ಕೋಟಿ ರೂ. ಬಿಡುಗಡೆ ಮಾಡಿವೆ. ಇದರ ನಿರ್ವಹಣೆಗೆಂದು ಪ್ರತ್ಯೇಕವಾಗಿ ಮೂರು ಕೋಟಿ ರೂ. ಮಂಜೂರಾಗಿದೆ. ಈ ಕೇಂದ್ರದಿಂದ ಮುಂದಿನ ದಿನಗಳಲ್ಲಿ ಮಲೆನಾಡಿನ ಮಕ್ಕಳನ್ನು ವಿಜ್ಞಾನ ವಿಷಯದತ್ತ ಆಕರ್ಷಿಸಲು ಅನುಕೂಲವಾಗಲಿದೆ. ವಿಜ್ಞಾನಕ್ಕೆ ಸಂಬಂಧಿಸಿದ ಕಾರ್ಯಾಗಾರ, ವಿಚಾರ ಸಂಕಿರಣ, ಹೊಸ ಸಂಶೋಧನೆಗಳಿಗೂ ಇದು ಪೂರಕವಾಗಲಿದೆ ಎಂದು ಹೇಳಿದರು.
    ಈ ಹಿಂದೆ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಿಸುವ ಉದ್ಧೇಶ ಹೊಂದಲಾಗಿತ್ತು. ಆ ನಿಟ್ಟಿನಲ್ಲಿ ಬಹುತೇಕ ಅಂತಿಮ ಹಂತದ ಸಿದ್ಧತೆಗಳೂ ಪೂರ್ಣಗೊಂಡಿದ್ದವು. ಆದರೆ ಸಹ್ಯಾದ್ರಿ ಕಾಲೇಜು ಜಾಗವನ್ನು ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ಗೆ ಬಳಕೆ ಮಾಡುವ ಸಂಬಂಧ ಪರ ಹಾಗೂ ವಿರೋಧ ಚರ್ಚೆಗಳು ಆರಂಭವಾದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ನವುಲೆ ಕೃಷಿ ಕಾಲೇಜು ಆವರಣದಲ್ಲಿ ಅನುಷ್ಟಾನಗೊಳಿಸಲಾಗುವುದು. 70 ಕೋಟಿ ರೂ. ಮೊತ್ತದ ಈ ಯೋಜನೆಗೆ ಜಾಗ ಹಸ್ತಾಂತರವಾಗಬೇಕಿದೆ ಎಂದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts