

ಭದ್ರಾವತಿ: ವರದಕ್ಷಿಣೆ, ಬಾಲ್ಯವಿವಾಹ ನಿಷೇಧಿಸುವುದು ಮತ್ತು ಸರಳ ವಿವಾಹ ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ವಿ.ರವಿಕುಮಾರ್ ಹೇಳಿದರು.
ನಗರದ ನ್ಯೂಟೌನ್ ರೋಟರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ವಿವಿಧ ಇಲಾಖೆಗಳ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ದಶಮಾನೋತ್ಸವ ಕಾರ್ಯಕ್ರಮದಡಿ ಏರ್ಪಡಿಸಿದ್ದ ಹೆಣ್ಣು ಮಕ್ಕಳ ವಿವಿಧ ಕಾಯ್ದೆಗಳ ಕುರಿತ ತಾಲೂಕು ಮಟ್ಟದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಲಿಂಗ ಪಕ್ಷಪಾತ ತಡೆಗಟ್ಟುವುದು, ಹೆಣ್ಣು ಮಕ್ಕಳ ರಕ್ಷಣೆ, ಶಿಕ್ಷಣ ಖಾತ್ರಿಗೊಳಿಸುವ ಉದ್ದೇಶದಿಂದ ಬೇಟಿ ಬಚಾವೋ ಬೇಟಿ ಪಢಾವೊ ಯೋಜನೆ ಹಮ್ಮಿಕೊಂಡಿರುವುದು ಅರ್ಥಪೂರ್ಣ ಎಂದರು.
ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ರೋಟರಿ ಅಧ್ಯಕ್ಷ ರಾಘವೇಂದ್ರ ಉಪಾಧ್ಯಾಯ, ಸುಂದರ್ ಬಾಬು, ನಿರಂಜನ್, ಶಿಶು ಅಭಿವೃದ್ದಿ ಅಧಿಕಾರಿ ಈರಪ್ಪ ಉಪಸ್ಥಿತರಿದ್ದರು.