

ಸಾಗರ: ಮನುಷ್ಯನ ಮಾನಸಿಕ ಒತ್ತಡ ಕಡಿಮೆಗೊಳಿಸಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ನಗರದ ನೆಹರು ಮೈದಾನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದದಿಂದ ಏರ್ಪಡಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ತಾಲೂಕು ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಒತ್ತಡದಲ್ಲಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಾರೆ. ಯೋಗ, ವ್ಯಾಯಾಮವನ್ನು ಪ್ರತಿನಿತ್ಯ ಅಭ್ಯಾಸ ಮಾಡುವುದು ಒಳ್ಳೆಯದು. ಶಿಕ್ಷಕರಿಗೆ ಒತ್ತಡಮುಕ್ತರಾಗಿ ಕೆಲಸ ಮಾಡಲು ಇಂತಹ ಕ್ರೀಡಾಕೂಟಗಳ ಅಗತ್ಯವಿದೆ. ಕ್ರೀಡಾಸ್ಪರ್ಧೆಗಳಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕಾಗುತ್ತದೆ. ಶಿಕ್ಷಣ ಸಚಿವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶ್ ಮಾತನಾಡಿ, ತಾಲೂಕು ಮಟ್ಟದಲ್ಲಿ ಆಯೋಜಿಸಿರುವ ಸ್ಪರ್ಧೆಗೆ ಉತ್ತಮ ಸ್ಪಂದನೆ ದೊರೆತಿದೆ. ವೃತ್ತಿಯ ಜತೆ ಸರ್ಕಾರದ ಅನೇಕ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಶಿಕ್ಷಕ ಸಮೂಹ ಶ್ರಮಿಸುತ್ತದೆ. ಶಿಕ್ಷಕರ ಶ್ರೇಯೋಭಿವೃದ್ಧಿಗೆ ಪೂರಕ ಚಟುವಟಿಕೆಗಳನ್ನು ಸಂಘದಿಂದ ನಡೆಸಲಾಗುತ್ತದೆ ಎಂದರು.
ನಗರಸಭೆ ಸದಸ್ಯ ಗಣಪತಿ ಮಂಡಗಳಲೆ, ಎಲ್.ಚಂದ್ರಪ್ಪ, ರವಿಕುಮಾರ್, ಸಮನ್ವಯಾಧಿಕಾರಿ ಡಾ. ಅನ್ನಪೂರ್ಣಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭೂಮೇಶ್, ಪ್ರಮುಖರಾದ ಸತ್ಯನಾರಾಯಣ ಸಿರಿವಂತೆ, ಮನೋಹರ, ರಾಜಶೇಖರ ಶೆಟ್ಟಿ, ವಿಕ್ಟೋರಿಯಾ ಫರ್ನಾಂಡಿಸ್, ರಮೇಶ್, ದೇವೇಂದ್ರಪ್ಪ, ಪಾಲಾಕ್ಷಪ್ಪ, ಪ್ರಭು, ದಿನೇಶ್, ಚಂದ್ರಪ್ಪ ಇತರರಿದ್ದರು.