ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಅದ್ದೂರಿ ಬ್ರಹ್ಮರಥೋತ್ಸವ

12bdvt1
ಭದ್ರಾವತಿ ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬ್ರಹ್ಮರಥೋತ್ಸವ ನಡೆಯಿತು.
Published on

ಭದ್ರಾವತಿ: ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.

ಅಲಂಕೃತ ರಥದಲ್ಲಿ ಸ್ವಾಮಿಯನ್ನು ಪ್ರತಿಷ್ಠಾಪಿಸಿ ಮಧ್ಯಾಹ್ನ ಸರಿಯಾಗಿ 1 ಗಂಟೆಗೆ ಗರುಡ ಪಕ್ಷಿ ಆಕಾಶದಲ್ಲಿ ಕಾಣಿಸಿಕೊಂಡ ಶುಭ ಘಳಿಗೆಯಲ್ಲಿ ಸ್ವಾಮಿ ರಥವನ್ನು ಎಳೆಯಲಾಯಿತು. ರಥೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ಸ್ವಾಮಿಗೆ ಜೈಕಾರ ಹಾಕಿ ಉತ್ತುತ್ತಿ, ಬಾಳೆಹಣ್ಣುಗಳನ್ನು ರಥದ ಕಳಸಕ್ಕೆ ಎಸೆದರು.

ವಿವಿಧ ಮಹಿಳಾ ಭಜನಾ ತಂಡಗಳಿಂದ ಭಜನೆ, ಮಂಗಳ ವಾದ್ಯ, ವಿಶೇಷವಾಗಿ ಮಹಿಳೆಯರಿಂದ ಚಂಡೆವಾದ್ಯ ನಡೆಯಿತು. ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಶರ್ಮ, ಸಹಾಯಕ ಅರ್ಚಕ ಶ್ರೀನಿವಾಸ್, ಶಾಸಕ ಬಿ.ಕೆ.ಸಂಗಮೇಶ್ವರ್, ಬಿಇಒ ಎ.ಕೆ.ನಾಗೇಂದ್ರಪ್ಪ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಜಿಲ್ಲಾ ಧಾರ್ಮಿಕ ಪರಿಷತ್ ನಿರ್ದೇಶಕ ಜಿ.ರಮಕಾಂತ್, ಎಸ್.ನರಸಿಂಹಾಚಾರ್, ರವಿ, ಸುದರ್ಶನ್, ಸುಧೀಂದ್ರ, ಶ್ರೀಧರ್, ರಂಗಣ್ಣ, ಮಾರುತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net