ವಿದ್ಯಾರ್ಥಿ ಜೀವನದ ಅವಧಿ ಅಮೂಲ್ಯ

23sor5
ಸೊರಬದ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮವನ್ನು ಪ್ರಾಚಾರ್ಯೆ ನೇತ್ರಾವತಿ ಉದ್ಘಾಟಿಸಿದರು. ಪ್ರೊ. ಜಿ.ಆರ್.ಜೋಶಿ, ಯೋಗೀಶ್, ಆಶಾ ಗೌಡರ್, ಕಾವ್ಯಾ, ಡಾ. ಮಹೇಶ್ವರಿ ಇತರರಿದ್ದರು.
Published on

ಸೊರಬ: ವಿದ್ಯಾರ್ಥಿ ಜೀವನದ ಅವಧಿ ಅಮೂಲ್ಯವಾದುದು. ಆಸಕ್ತಿಯಿಂದ ಅಧ್ಯಯನ ನಡೆಸಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ. ನೇತ್ರಾವತಿ ಹೇಳಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಘಟಕದಿಂದ ಹಮ್ಮಿಕೊಂಡಿದ್ದ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಗೆ ಸರ್ಕಾರ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಿಮ್ಮ ಅಧ್ಯಯನಕ್ಕೆ ಅನುಕೂಲ ಆಗಲಿದೆ. ಪದವಿ ಅಧ್ಯಯನ ಮಾಡುವುದರಿಂದ ಅನೇಕ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಬಹುದು. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಸ್ತು, ಸಂಯಮಶೀಲ ಗುಣಗಳನ್ನು ಬೆಳೆಸಿಕೊಂಡು ಉನ್ನತ ಸಾಧನೆ ಮಾಡಬೇಕು ಎಂದು ತಿಳಿಸಿದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಜಿ.ಆರ್.ಜೋಶಿ ಮಾತನಾಡಿ, ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣವನ್ನು ಕಾಲೇಜಿನಲ್ಲಿ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಯೋಗೀಶ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಆಶಾ ಗೌಡರ್, ಡಾ. ಮೋಹನ್‌ಕುಮಾರ್, ಡಾ. ಮಾದೇಶ್, ಡಾ. ಮಹೇಶ್ವರಿ, ಕಾವ್ಯಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net