ದೇವರ ಸ್ಮರಣೆಯಿಂದ ಜೀವನದಲ್ಲಿ ಸತ್ಫಲ

25 RPT 1.
ರಿಪ್ಪನ್‌ಪೇಟೆಯ ಹೊಂಬುಜ ಜೈನಮಠದಲ್ಲಿ ಶ್ರೀ ಪಾರ್ಶ್ವನಾಥ ತೀರ್ಥಂಕರರ ಜನ್ಮಕಲ್ಯಾಣ ಪರ್ವಾಚರಣೆ ಪಲ್ಲಕ್ಕಿ ಉತ್ಸವ ಜರುಗಿತು. ಹೊಂಬುಜ ಜೈನ ಮಠದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಇತರರಿದ್ದರು.
Published on

ರಿಪ್ಪನ್‌ಪೇಟೆ: ಇಪ್ಪತ್ತಮೂರನೆ ತೀರ್ಥಂಕರ ಶ್ರೀ ಪಾರ್ಶ್ವನಾಥ ಸ್ವಾಮಿ ಆರಾಧನೆಯಿಂದ ಜೀವನದ ಸಂಕಷ್ಟಗಳು ಪರಿಹಾರಗೊಳ್ಳುತ್ತವೆ ಎಂದು ಹೊಂಬುಜ ಜೈನ ಮಠದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಸಮೀಪದ ಹೊಂಬುಜ ಜೈನಮಠದಲ್ಲಿ ಆಯೋಜಿಸಿದ್ದ ಶ್ರೀ ಪಾರ್ಶ್ವನಾಥ ತೀರ್ಥಂಕರರ ಜನ್ಮಕಲ್ಯಾಣ ಪರ್ವಾಚರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಜೈನ ಧರ್ಮದ ಇಪ್ಪತ್ತನಾಲ್ಕು ತೀರ್ಥಂಕರರ ಪುರಾಣಗಳಲ್ಲಿ ದೇವರ ಧ್ಯಾನ, ಸ್ತುತಿ, ಪೂಜಾ ಕೈಂಕರ್ಯಗಳ ಉಲ್ಲೇಖವಿದೆ. ಭಕ್ತರು ನಿತ್ಯ ಧ್ಯಾನ, ಪೂಜೆ, ಜಿನಭಕ್ತಿ ಸ್ತುತಿಗಳನ್ನು ಜಪಿಸುವುದರಿಂದ ಜೀವನದಲ್ಲಿ ಸತ್ಫಲ ದೊರೆಯುತ್ತದೆ ಎಂದು ತಿಳಿಸಿದರು.

ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಮಂದಿರದಲ್ಲಿ ವಿಶೇಷ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಜಗನ್ಮಾತೆ ಯಕ್ಷಿಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಜಿನಾಗಮೋಕ್ತ ವಿಧಿ ಜರುಗಿತು. ಪಲ್ಲಕ್ಕಿ ಉತ್ಸವ, ನಾಮಕರಣ ತೊಟ್ಟಿಲು ಸೇವೆ ನಡೆಯಿತು. ಶ್ರೀ ನೇಮಿನಾಥ ಸ್ವಾಮಿ, ಶ್ರೀ ಮಹಾವೀರ ಸ್ವಾಮಿ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀ ಸರಸ್ವತಿ ದೇವಿ ಹಾಗೂ ಶ್ರೀ ಕ್ಷೇತ್ರಪಾಲ, ಶ್ರೀ ನಾಗಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net