ಹೆಣ್ಣು ಮಕ್ಕಳ ಆರೋಗ್ಯ ಜಾಗ್ರತೆ ವಹಿಸಿ

29sor6
ಸೊರಬದಲ್ಲಿ ಏರ್ಪಡಿಸಿದ್ದ ಪೋಷಣ್ ಮಾಸಾಚರಣೆಯನ್ನು ನ್ಯಾಯಾಧೀಶ ರಾಜು ಕೆ.ಕೆಡಬಾಳಕರ್ ಉದ್ಘಾಟಿಸಿದರು. ನೂತನ್ ನಾಯ್ಕ, ಮಂಜುಳಾ ಬಿ.ಹೆಗಡಾಳ ಇತರರಿದ್ದರು.
Published on

ಸೊರಬ: ಜೀವನಶೈಲಿ ಹಾಗೂ ಆಹಾರ ಕ್ರಮದಲ್ಲಿನ ಬದಲಾವಣೆಯು ಹೆಣ್ಣು ಮಕ್ಕಳ ಮಾನಸಿಕ, ದೈಹಿಕ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ತಾಲೂಕು ಆರೊಗ್ಯಾಧಿಕಾರಿ ನೂತನ್ ನಾಯ್ಕ ಹೇಳಿದರು.

ಪಟ್ಟಣದ ಸೀಶಕ್ತಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ, ತಾಪಂ, ತಾಲೂಕು ಆಡಳಿತದಿಂದ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿ, ಪಾಲಕರು ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.

ಪೋಷಣ್ ಅಭಿಯಾನದ ಮೂಲಕ ಶಿಶು ಹಾಗೂ ತಾಯಂದಿರ ಮರಣ ಪ್ರಮಾಣ ಕಡಿಮೆ ಮಾಡುವ ಅಗತ್ಯವಿದೆ. ರಾಜ್ಯದಲ್ಲಿ ರಕ್ತ ಹೀನತೆ ಪ್ರಕರಣಗಳನ್ನು ಕಡಿಮೆ ಮಾಡಲು ಸಾಧ್ಯವಾಗುತ್ತಿಲ್ಲ. ಅಪೌಷ್ಟಿಕತೆ ನಡುವೆ ಗರ್ಭ ಧರಿಸಿದಾಗ ಸಮಸ್ಯೆಗಳು ಎದುರಾಗುತ್ತಿವೆ. ಪೌಷ್ಟಿಕಾಂಶಯುಕ್ತ ಆಹಾರ ಸೇವನೆಗೆ ಆದ್ಯತೆ ನೀಡಲು ಸರ್ಕಾರ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದರು.

ತಹಸೀಲ್ದಾರ್ ಮಂಜುಳಾ ಬಿ. ಹೆಗಡಾಳ್, ಪ್ರಧಾನ ಸಿವಿಲ್ ನ್ಯಾಯಾಧೀಶ ರಾಜು ಕೆ. ಶೆಡಬಾಳ್ಕರ್, ತಾಪಂ ಇಒ ಕೆ.ಜಿ.ಶಶಿಧರ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಎನ್.ಕೆ.ನಾಗರಾಜ್, ಕಾರ್ಯದರ್ಶಿ ವಿನಯ್ ಪಾಟೀಲ್, ಶಿಕ್ಷಣ ಇಲಾಖೆಯ ವಿನಾಯಕ, ಶಾಂತ, ಕುಮಾರ್ ನಾಯ್ಕ, ಕೆ.ಜಿ.ನೇತ್ರಾವತಿ, ರೇಣುಕಾ, ವೀಣಾ, ಕಾವೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net