ನಗರೀಕರಣದಿಂದ ತಾಪಮಾನ ಏರಿಕೆ

5 skp 2
ವಿಶ್ವ ಪರಿಸರದ ದಿನ ಅಂಗವಾಗಿ ಶಿಕಾರಿಪುರದ ಕುಮದ್ವತಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಸಿಗಳನ್ನು ನೆಡಲಾಯಿತು. ಡಾ. ಕೆ.ಸಿ.ರವೀಂದ್ರ, ಆರ್.ಕೋಟೋಜಿರಾವ್, ಅಭಿಲಾಷ್ ಇತರರಿದ್ದರು.
Published on

ಶಿಕಾರಿಪುರ: ಮನುಷ್ಯ ಸ್ವಾರ್ಥಕ್ಕಾಗಿ ಪ್ರಕೃತಿಯನ್ನು ನಾಶ ಮಾಡುತ್ತಿದ್ದಾನೆ. ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ಕುಮದ್ವತಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಕೆ.ಸಿ.ರವೀಂದ್ರ ಹೇಳಿದರು.

ಕುಮದ್ವತಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಪರಿಸರದ ದಿನದ ಅಂಗವಾಗಿ ಸಸಿಗಳನ್ನು ನೆಟ್ಟು ಮಾತನಾಡಿದ ಅವರು, ನಗರೀಕರಣದಿಂದ ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ. ಕಾಡಿನ ನಾಶದಿಂದ ಅನೇಕ ಜೀವ ಸಂಕುಲಗಳು ಅಳಿವಿನಂಚಿಗೆ ತಲುಪಿವೆ ಎಂದು ತಿಳಿಸಿದರು.

ಪ್ರಾಧ್ಯಾಪಕ ಆರ್.ಕೋಟೋಜಿರಾವ್ ಮಾತನಾಡಿ, ಪ್ರಕೃತಿ ನಮಗೆ ಎಲ್ಲವನ್ನೂ ನೀಡಿದೆ. ಆದ್ದರಿಂದ ನಾವೆಲ್ಲರೂ ಪರಿಸರ ಸ್ನೇಹಿ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂದರು. ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಅಭಿಲಾಷ್, ಸಂಸ್ಥೆಯ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net