ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ

5 skp 1
ಶಿಕಾರಿಪುರದ ಕುಮದ್ವತಿ ಪಿಯು ಕಾಲೇಜಿನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ವೀರೇಂದ್ರ, ಚಂದ್ರಶೇಖರ್, ಕುಮಾರಸ್ವಾಮಿ, ಲವ, ಚನ್ನೇಶ್ ಮತ್ತಿತರರು ಪಾಲ್ಗೊಂಡಿದ್ದರು.
Published on

ಶಿಕಾರಿಪುರ: ಗುರುವಿನ ಸ್ಥಾನ ಅತ್ಯಂತ ಶ್ರೇಷ್ಠ. ಗುರು ಎಂದರೆ ಶಕ್ತಿ ಎಂದು ಉಪನ್ಯಾಸಕ ಚಂದ್ರಶೇಖರ್ ಹೇಳಿದರು.

ಕುಮದ್ವತಿ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಮಹಾನ್ ವ್ಯಕ್ತಿ ವಿದ್ಯಾರ್ಥಿ ಸಮೂಹಕ್ಕೆ ದಾರಿದೀಪವಾದವರು ಎಂದು ತಿಳಿಸಿದರು.

ಪ್ರಾಚಾರ್ಯ ಡಾ. ವೀರೇಂದ್ರ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಜ್ಞಾನ ಸೇರಿದಂತೆ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಂಡಲ್ಲಿ ಸಮಾಜದ ಗಣ್ಯ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ. ಇಂದಿನ ಯುವಜನತೆ ದೇಶ ವಿದೇಶದಲ್ಲಿ ಉದ್ಯೋಗವನ್ನು ಅರಸಿ ಜ್ಞಾನದ ಮುಖಾಂತರ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ. ದೇಶ ಕಟ್ಟುವಲ್ಲಿ ಶಿಕ್ಷಣ ಮತ್ತು ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖ ಎಂದರು.

ಉಪನ್ಯಾಸಕ ಕುಮಾರಸ್ವಾಮಿ ಮಾತನಾಡಿ, ಅಕ್ಷರ ಕಲಿಸಿದವರು ಗುರು ಹಾಗೂ ನಮ್ಮೆಲ್ಲರಿಗೆ ತಾಯಿಯೇ ಮೊದಲ ಗುರು. ಇಂದಿನ ದಿನ ಗುರು ಹಿರಿಯರಿಗೆ ಗೌರವಿಸುವ ಮೂಲಕ ಶಿಕ್ಷಕರ ದಿನ ಆಚರಿಸಬೇಕು ಎಂದು ತಿಳಿಸಿದರು. ಉಪನ್ಯಾಸಕ ಲವ, ಚನ್ನೇಶ್, ಅಧ್ಯಾಪಕ ವರ್ಗ ಮತ್ತು ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net