

ಆನಂದಪುರ: ಸಮೀಪದ ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಷಯಗಳ ವಿವಿಯ ಅಧೀನದ ಶಿವಮೊಗ್ಗದ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯಿತು.
ಆವರಣದ ಮುಖ್ಯಸ್ಥ ಡಾ. ಡಿ.ತಿಪ್ಪೇಶ್ ಉದ್ಘಾಟಿಸಿ ಮಾತನಾಡಿ, ಯೋಗವು ವಿಶ್ವಕ್ಕೆ ಭಾರತ ನೀಡಿದ ಮಹಾನ್ ಕೊಡುಗೆಯಾಗಿದೆ. ನಿತ್ಯ ಯೋಗಾಭ್ಯಾಸ ಮಾಡುತ್ತಿರುವ ಲಕ್ಷಾಂತರ ಜನರು ಆರೋಗ್ಯಯುತ ದೀರ್ಘಾಯುಷ್ಯದ ಬದುಕು ಸಾಗಿಸುತ್ತಿದ್ದಾರೆ ಎಂದರು.
ದೈಹಿಕ ಶಿಕ್ಷಣ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.