More

    ಬದಲಾಗುತ್ತಾ RCB ಹೆಸರು; ಶಿವಣ್ಣ ರೊಚ್ಚಿಗೆದ್ದು ಏನ್ ಹೇಳ್ತಿದ್ದಾರೆ ಗೊತ್ತಾ?

    ಬೆಂಗಳೂರು: ವಿಶ್ವದ ಶ್ರೀಮಂತ ಕ್ರಿಕೆಟ್​ ಟೂರ್ನಿಗಳಲ್ಲಿ ಒಂದಾದ ಇಂಡಿಯನ್​ ಪ್ರೀಮಿಯರ್​ ಲೀಗ್​ ಆರಂಭವಾಗುವುದಕ್ಕೆ ದಿನಗಣನೆ ಶುರುವಾಗಿದ್ದು, ಮಾರ್ಚ್​ 22 ರಂದು ಆರಂಭವಾಗಲಿರುವ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ಮುಖಾಮುಖಿಯಾಗಲಿವೆ. ಪ್ರತಿಬಾರಿಯಂತೆ ಈ ಬಾರಿಯೂ ಆರ್​ಸಿಬಿ ಅಭಿಮಾನಿಗಳು ಜೋಶ್​ನಲ್ಲಿದ್ದಾರೆ. ಕಪ್​ ನಮ್ಮದೆ ಎನ್ನುವ ಕೂಗು ಜೋರಾಗಿಯೆ ಇದೆ. ಆರ್​ಸಿಬಿ ಬಿಡುಗಡೆ ಮಾಡಿದ ಪೋಮೊವೊಂದು ಇದೀಗ ಅಭಿಮಾನಿಗಳಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದೆ.

    ಅಭಿಮಾನಿಗಳ ಬಹುವರ್ಷಗಳ ಬೇಡಿಕೆಯನ್ನು ಆರ್​ಸಿಬಿ ತಂಡ ಕೊನೆಗೂ ಈಡೇರಿಸಲು ಮುಂದಾಗಿದೆ. ಇಂಗ್ಲಿಷ್​ನಲ್ಲಿ “ರಾಯಲ್​ ಚಾಲೆಂಜರ್ಸ್​ ಬ್ಯಾಂಗಲೋರ್​’ (Bangalore) ಎಂದಿರುವ ತಂಡದ ಹೆಸರು ಇನ್ನು ಮುಂದೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (Bengaluru) ಎಂದು ಬದಲಾಗುವ ನಿರೀಕ್ಷೆ ಹರಡಿದೆ.

    ಇದಕ್ಕೆ ಸಂಬಂಧಿಸಿದಂತೆ ಆರ್​ಸಿಬಿ ಫ್ರಾಂಚೈಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಕರುನಾಡ ಚಕ್ರವರ್ತಿ ಡಾ. ಶಿವರಾಜ್​ಕುಮಾರ್​ ಈ ಬಗ್ಗೆ ಸುಳಿವು ನೀಡಿದ್ದು, ಮಾರ್ಚ್​ 19ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಆರ್​ಸಿಬಿ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

    ಇದನ್ನೂ ಓದಿ: ಆರ್​ಸಿಬಿಗೆ ಬಂತು ಆನೆ ಬಲ; ಬದಲಿ ಆಟಗಾರನಾಗಿ ಮಾರಕ ವೇಗಿ ಎಂಟ್ರಿ

    ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಶಿವರಾಜ್​ಕುಮಾರ್ ಅವರ ಎದುರು ಮೂರು ಲಾಂಗ್​ಗಳನ್ನು ಇಡಲಾಗಿದೆ. ಒಂದರಲ್ಲಿ ರಾಯಲ್ ಇದ್ದರೆ, ಮತ್ತೊಂದು ಲಾಂಗ್​ನಲ್ಲಿ ಚಾಲೆಂಜರ್ಸ್ ಇದೆ. ಕೊನೆಯ ಲಾಂಗ್​ನಲ್ಲಿ Bangalore ಎಂದಿದೆ. ಆದರೆ ಅದನ್ನು ಪಕ್ಕಕ್ಕೆ ಸರಿಸುವ ಶಿವನ್ಣ ಅರ್ಥವಾಯ್ತಾ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕೂಡ ಇದೇ ರೀತಿ ಜಾಹೀರಾತಲ್ಲಿ ಭಾಗಿ ಆಗಿದ್ದರು.

    ಇದೀಗ ಆರ್​ಸಿಬಿ 17ನೇ ಸೀಸನ್​ ಆರಂಭಕ್ಕೆ ಸಜ್ಜಾಗಿ ನಿಂತಿದೆ. ಈ ಬಾರಿಯಾದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲುವ ಮೂಲಕ 16 ವರ್ಷಗಳ ಸುದೀರ್ಘ ಕಾಯುವಿಕೆಯನ್ನು ಅಂತ್ಯಗೊಳಿಸುತ್ತದೆಯೇ ಎಂದು ಕಾದು ನೋಡಬೇಕಿದೆ. 17ನೇ ಆವೃತ್ತಿಯ ಐಪಿಎಲ್ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಲೀಗ್‌ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಕ್ರೀಡಾಭಿಮಾನಿಗಳು ಈ ಪಂದ್ಯ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts