ಶಿವಪುರ ನಾಗಬ್ರಹ್ಮಲಿಂಗೇಶ್ವರ ಸನ್ನಿಧಿ ಪುನಃ ಪ್ರತಿಷ್ಠಾಪನೆ

sanmana
ವಿವಿಧ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೊಡುಗೆ ನೀಡಿದ ಉದ್ಯಮಿ ಹರೀಶ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.
Published on

ಹೆಬ್ರಿ: ಶಿವಪುರ ಗ್ರಾಮದ ಎಳಗೋಳಿ ಚಿಟ್ಟೆಬೆಟ್ಟು ಸಪರಿವಾರ ಸಹಿತ ಶ್ರೀ ನಾಗಬ್ರಹ್ಮಲಿಂಗೇಶ್ವರ ಸನ್ನಿಧಿಯಲ್ಲಿ ಶ್ರೀ ನಾಗ ಬ್ರಹ್ಮಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಪನೆ, ಆಶ್ಲೇಷ ಬಲಿ, ನಾಗದರ್ಶನ, ವಿವಿಧ ಧಾರ್ಮಿಕ ವಿಧಿವಿಧಾನ ಭಾನುವಾರ ನಡೆಯಿತು.

ಶಿವಪುರ ವಾಸುದೇವ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು. ವಿವಿಧ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೊಡುಗೆ ನೀಡಿದ ಎಳಗೋಳಿ ಚಿಟ್ಟೆಬೆಟ್ಟು ಕುಟುಂಬದ ಉದ್ಯಮಿ ಹರೀಶ್ ಶೆಟ್ಟಿ ದಂಪತಿಯನ್ನು ಅರ್ಚಕ ವಾಸುದೇವ ಭಟ್ ಸನ್ಮಾನಿಸಿದರು.

ಹೆಬ್ರಿ ಸರ್ಕಾರಿ ಪ್ರೌಢಶಾಲೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೀತಾನದಿ ವಿಜೇಂದ್ರ ಶೆಟ್ಟಿ, ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ದಿವಾಕರ ಮರಕಾಲ ಎಸ್., ಹೆಬ್ರಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ತಿಪ್ಪೇಸ್ವಾಮಿ, ಶಿವಪುರ ಸರ್ಕಾರಿ ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಗುಲಾಬಿ ಅಣ್ಣಪ್ಪ ಕುಲಾಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ರಮಾನಂದ ಶೆಟ್ಟಿ, ಶಿವಪುರದ ಮುಖಂಡ ಹುಣ್ಸೆಯಡಿ ಸುರೇಶ ಶೆಟ್ಟಿ, ಯಳಗೋಳಿ ಚಿಟ್ಟೆಬೆಟ್ಟು ಕುಟುಂಬಸ್ಥರು, ಮೂಲಸ್ಥಾನದವರು ಉಪಸ್ಥಿತರಿದ್ದರು. ಎಳಗೋಳಿ ಚಿಟ್ಟೆಬೆಟ್ಟು ಚೈತನ್ಯ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net