ಶಿವಮೊಗ್ಗದಿಂದ ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧೆ ಬಗ್ಗೆ ನಿರ್ಧಾರವಿಲ್ಲ: ಶಿವರಾಜ್‌ಕುಮಾರ್‌

ಬೆಂಗಳೂರು: ಮುಂಬರುವ ಲೋಕಸಭಾ ಉಪಚುನಾವಣೆಯಲ್ಲಿ ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಎಂದು ನಟ ಶಿವರಾಜ್‌ಕುಮಾರ್‌ ತಿಳಿಸಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಗೀತಾ ಶಿವರಾಜ್‌ಕುಮಾರ್‌ ಅವರು ಸ್ಪರ್ಧಿಸಬೇಕು, ಗೆಲ್ಲಬೇಕೆಂದು ದೇವರ ಇಚ್ಛೆ ಇದ್ದರೆ ಯಾರೂ ತಪ್ಪಿಸಲಾಗದು ಎಂದರು.

ಪಾರ್ವತಮ್ಮ ರಾಜ್‌ಕುಮಾರ್ ಅವರ ಸಮಾಧಿ ಸ್ಮಾರಕ ಸ್ಥಳ ಅಭಿವೃದ್ದಿ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಮಧು ಬಂಗಾರಪ್ಪ ಜೆಡಿಎಸ್ ರಾಜ್ಯಾಧ್ಯಕ್ಷ ರಾಗುವ ವಿಷಯದಲ್ಲಿ ಆಶಾಭಾವನೆ ವ್ಯಕ್ತಪಡಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯಾವ ನಿರ್ಧಾರ ತೆಗೆದುಕೊಂಡರೂ ಸ್ವಾಗತಿಸುತ್ತೇವೆ. ಶಿವಮೊಗ್ಗದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ತಾವು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದರು.