ಉತ್ತರ ಕನ್ನಡ ಪ್ರವಾಹ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಶಿವರಾಮ ಹೆಬ್ಬಾರ್

ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾರೀ ಮಳೆಯ ಪರಿಣಾಮ ಪ್ರವಾಹ ಉಂಟಾಗಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ. ಪ್ರವಾಹ ಪೀಡಿತ ಪ್ರದೇಶಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್​ ಹೆಬ್ಬಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರೂರು, ಮಂಜಗುಣಿ, ಅಂಕೋಲಾ ತಾಲೂಕಿನ ವಿವಿಧ ಗ್ರಾಮಕ್ಕೆ ಸಚಿವರು ಭೇಟಿ ನೀಡಿದ್ದಾರೆ. ಅಂಕೋಲಾದಲ್ಲಿ ಕಾಳಜಿ ಕೇಂದ್ರಕ್ಕೆ ಭೇಟಿ ಕೊಟ್ಟು ಅಲ್ಲಿನ ನೆರೆ ಸಂತ್ರಸ್ತರನ್ನು ಮಾತನಾಡಿಸಿ ಬಂದಿದ್ದಾರೆ. ಪ್ರವಾಹದಿಂದಾಗಿ ಮೃತರಾದವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಈ ವೇಳೆ ಘೋಷಿಸಿದ್ದಾರೆ. … Continue reading ಉತ್ತರ ಕನ್ನಡ ಪ್ರವಾಹ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಶಿವರಾಮ ಹೆಬ್ಬಾರ್