

ಮಂಗಳೂರು : ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಅ.10ರಂದು ನಡೆಯಲಿರುವ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ ಅಂಗವಾಗಿ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.
ಕಾಲೇಜು ಹಾಗೂ ಮುಕ್ತ ವಿಭಾಗಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಕಾಲೇಜು ವಿಭಾಗಕ್ಕೆ ‘ ಕಾರಂತರ ವಿಜ್ಞಾನ ಸಾಹಿತ್ಯ - ಮಕ್ಕಳ ಸಾಹಿತ್ಯ ಅವಲೋಕನ, ಅನುಸಂಧಾನ ‘ ಹಾಗೂ ಮುಕ್ತ ವಿಭಾಗಕ್ಕೆ ‘ಕಾರಂತರ ಸಾಹಿತ್ಯ (ಕಾದಂಬರಿಗಳು) ಅವಲೋಕನ, ಅನುಸಂಧಾನ ’
ಪ್ರಬಂಧದ ವಿಷಯವಾಗಿದೆ.
ಮೂರು ಪುಟಕ್ಕೆ ಮೀರದಂತೆ ಪ್ರಬಂಧವನ್ನು ಅ.6ರೊಳಗಾಗಿ ಸ್ವ ವಿಳಾಸ ಮತ್ತು ಸಂಪರ್ಕ ದೂರವಾಣಿ ಸಂಖ್ಯೆಯೊಂದಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮಗಾಂಧಿ ರಸ್ತೆ, ಕೊಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ಕಳುಹಿಸುವಂತೆ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.............................