More

    ನಿಂಗನಗೌಡ ಮರಿಗೌಡರ ಉಪಾಧ್ಯಕ್ಷ; ಕೆಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಶಿವಕುಮಾರಗೌಡ ಪಾಟೀಲ

    ಧಾರವಾಡ: ಅವಿಭಜಿತ ಧಾರವಾಡ ಜಿಲ್ಲೆಯ ಕಾರ್ಯಕ್ಷೇತ್ರ ಹೊಂದಿರುವ ಪ್ರತಿಷ್ಠಿತ ಕೆಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಗರದ ಸುಭಾಸ ರಸ್ತೆಯಲ್ಲಿರುವ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಗುರುವಾರ ಜರುಗಿತು. ನೂತನ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಧುರೀಣ ಶಿವಕುಮಾರಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ನಿಂಗನಗೌಡ ಮರಿಗೌಡರ ಅವಿರೋಧವಾಗಿ ಆಯ್ಕೆಯಾದರು.
    ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಕಾರಣ ಇಬ್ಬರೂ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಶಾಲಂ ಹುಸೇನ್ ಪ್ರಕಟಿಸಿದರು. ಆಡಳಿತ ಮಂಡಳಿಯ ಸದಸ್ಯರು ಒಗ್ಗಟ್ಟಿನಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.
    ನೂತನ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ 6ನೇ ಅವಧಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಈ ಮೊದಲು ಒಂದು ಅವಧಿಗೆ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts