ಶಿವರಾಜ ತಂಗಡಗಿಗೆ ಡಿಸಿಎಂ ಸ್ಥಾನ ನೀಡಲು ಗಂಗಾಮತ ಸಮಾಜ ಆಗ್ರಹ

Kanakagiri Gangamata Samaja Pressmeet
ಕನಕಗಿರಿಯ ಪ್ರವಾಸಿ ಮಂದಿರದಲ್ಲಿ ಬುಧವಾರ ಗಂಗಾಮತ ಸಮಾಜದಿಂದ ಸಭೆ ನಡೆಸಲಾಯಿತು. ತಾಲೂಕು ಅಧ್ಯಕ್ಷ ಟಿ.ಜೆ ರಾಜಶೇಖರ, ಟಿ.ಜೆ ರಾಮಚಂದ್ರ, ಕನಕಪ್ಪ ವಾಲೇಕಾರ, ಹನುಮೇಶ ವಾಲೇಕಾರ ಇತರರಿದ್ದರು.
Published on

ಕನಕಗಿರಿ: ಕೊಪ್ಪಳ ಡಿಸಿಸಿ ಅಧ್ಯಕ್ಷ ಸ್ಥಾನವನ್ನು ಸಮರ್ಪಕವಾಗಿ ನಿಭಾಯಿಸಿ ಜಿಲ್ಲೆಯಲ್ಲಿ ಮೂರು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಶಾಸಕ ಶಿವರಾಜ ತಂಗಡಗಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ಗಂಗಾಮತ ಸಮಾಜದ ತಾಲೂಕು ಅಧ್ಯಕ್ಷ ಟಿ.ಜೆ ರಾಜಶೇಖರ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಸಮಾಜದ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿಯೇ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಶಿವರಾಜ ತಂಗಡಗಿ ಡಿಸಿಸಿ ಅಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲ ಪ್ರಮುಖ ಪಾತ್ರವಹಿಸಿದ್ದಾರೆ. ಇವರ ಸಂಘಟನೆಯಿಂದಾಗಿ ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.

ಮುಂಬರುವ ಜಿಪಂ, ತಾಪಂ, ಲೋಕಸಭಾ ಚುನಾವಣೆಯಲ್ಲಿ ದಲಿತ ಮತಗಳ ಸೆಳೆಯುವುದಕ್ಕಾಗಿ ತಂಗಡಗಿಗೆ ಡಿಸಿಎಂ ಸ್ಥಾನ ಕೊಡಬೇಕು.ಇದರಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗುತ್ತದೆ. ಡಿಸಿಎಂ ನೀಡಿದಿದ್ದರೆ ಸಚಿವ ಸ್ಥಾನವನ್ನಾದರೂ ನೀಡಬೇಕೆಂದು ಆಗ್ರಹಿಸಿದರು. ಪ್ರಮುಖರಾದ ವಿರುಪಣ್ಣ ಕಲ್ಲೂರು, ಹುಲಗಪ್ಪ ವಾಲೇಕಾರ, ಕೃಷ್ಣಪ್ಪ ವದ್ದಿಗೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net