More

    ಶಿವಶರಣರ ಕಾಯಕ ನಿಷ್ಠೆ ಅವಿಸ್ಮರಣೀಯ

    ಬಳ್ಳಾರಿ: ಶಿವಶರಣರು 12ನೇ ಶತಮಾನದಲ್ಲಿ ಯಾವುದೇ ಕಾಯಕ ಮೇಲಲ್ಲ ಮತ್ತು ಕೀಳಲ್ಲ ಎಂಬ ಮನೋಧೋರಣೆಯಿಂದ ಕಾಯಕರಾಗಿ ದೇವರನ್ನು ಒಲಿಸಿಕೊಂಡಿದ್ದರು ಎಂದು ಮಹಾನಗರ ಪಾಲಿಕೆ ಮೇಯರ್ ಬಿ.ಶ್ವೇತಾ ಹೇಳಿದರು.

    ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಕಾಯಕ ಶರಣರಾದ ಮಾದಾರ ಚನ್ನಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಮಾದಾರ ದೂಳಯ್ಯ, ಉರಿಲಿಂಗ ಪೆದ್ದಿ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಬಸವಣ್ಣ ಅವರ ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಶರಣರಿದ್ದರು. ಅವರಲ್ಲಿ ಮಾದಾರ ಚನ್ನಯ್ಯ, ಸಮಗಾರ ಹರಳಯ್ಯ, ಉರಿಲಿಂಗಿಪೆದ್ದಿ, ಮಾದಾರ ದೂಳಯ್ಯ, ಡೋಹರ ಕಕ್ಕಯ್ಯ ಎಂಬ ಐವರು ಕಾಯಕ ಶರಣರು ಪ್ರಮುಖ ಹಿರಿಯ ಶರಣರಾಗಿದ್ದರು. ಅವರ ಜೀವನ ಹಾಗೂ ಮೌಲ್ಯಗಳನ್ನು ಸಮಾಜಕ್ಕೆ ಬಿತ್ತರಿಸುವ ನಿಟ್ಟಿನಲ್ಲಿ ಸರ್ಕಾರ ಜಯಂತಿ ಆಚರಣೆ ಮಾಡುತ್ತಿದೆ ಎಂದರು.

    ವಿಶೇಷ ಉಪನ್ಯಾಸ ನೀಡಿದ ಸಾಹಿತಿ ಎನ್.ಡಿ.ವೆಂಕಮ್ಮ , ಕಾಯಕ ಶರಣರು ತಮ್ಮ ವಚನಗಳ ಮೂಲಕ ಸಮಾಜದಲ್ಲಿರುವ ಕಂದಾಚಾರ, ಜಾತಿ ಪದ್ಧತಿಗಳನ್ನು ಹೋಗಲಾಡಿಸುತ್ತಿದ್ದರು. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರ ವಚನಗಳನ್ನು ಅಧ್ಯಯನ ಮಾಡುವುದು ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

    ನಿವೃತ್ತ ಉಪನ್ಯಾಸಕಿ ಸುಶೀಲಾ ಮಾತನಾಡಿ, 12ನೇ ಶತಮಾನದಲ್ಲಿದ್ದ ಶರಣರು ಸಮಾಜದಲ್ಲಿದ್ದ ಅಂಕು-ಡೊಂಕುಗಳ ಕುರಿತು ಸರಳ ಭಾಷೆಯ ಮೂಲಕ ಸಾಮಾನ್ಯ ಜನರಿಗೆ ತಿಳಿಸುವ ಕಾರ್ಯ ಮಾಡಿದರು. ವಿದ್ಯಾರ್ಥಿಗಳು ಶರಣರ ವಚನಗಳನ್ನು ಅಧ್ಯಯನ ಮಾಡಬೇಕು. ಆಗ ಮಾತ್ರ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್‌ಬಳಕೆ ಮಾಡುವುದನ್ನು ಕಡಿಮೆ ಮಾಡಿ ಓದಿನ ಕಡೆ ಗಮನ ಕೊಡಬೇಕು. ಪುಸ್ತಕಗಳನ್ನು ಹೆಚ್ಚು ಹೆಚ್ಚು ಅಧ್ಯಯನ ಮಾಡಬೇಕು ಎಂದರು.

    ಉಪ ಮೇಯರ್ ಬಿ.ಜಾನಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಸೇರಿದಂತೆ ಇಲಾಖೆಯ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts