ಭತ್ತದ ಗದ್ದೆಯಲ್ಲಿನ ಕಳೆ ತೆಗೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ!

Karandlaje
Published on

ಉಡುಪಿ: ಕೇಂದ್ರ ಸಚಿವೆಯಾದ ಬಳಿಕ ರಾಜ್ಯದಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಉಡುಪಿಯ ಕಡೇಕಾರು ಗ್ರಾಮದಲ್ಲಿ ರೈತ ಮಹಿಳೆಯರ ಜತೆ ಭತ್ತದ ಗದ್ದೆಯಲ್ಲಿ ಕಳೆ ಕೀಳುವ ಮೂಲಕ ನಿಮ್ಮ ಜತೆ ನಾವಿದ್ದೇವೆ ಎಂದು ಆತ್ಮಸ್ಥೈರ್ಯ ತುಂಬಿದರು.

ಈ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಶ್ವಸಂಸ್ಥೆಯಲ್ಲಿ ಭಾರತವು ರಾಗಿಗಳನ್ನು ಅಂತಾರಾಷ್ಟ್ರೀಯವಾಗಿ ಪರಿಗಣಿಸಲು ನಿರ್ಣಯವನ್ನು ಅಂಗೀಕರಿಸಬೇಕೆಂದು ಪ್ರಸ್ತಾಪಿಸಿದ ನಂತರ, ಎಲ್ಲಾ ಸದಸ್ಯ ರಾಷ್ಟ್ರಗಳು ಈ ಪರವಾಗಿ ಮತ ಚಲಾಯಿಸಿದ್ದು, 2023 ಅನ್ನು 'ಅಂತಾರಾಷ್ಟ್ರೀಯ ರಾಗಿ ವರ್ಷ' ಎಂದು ಘೋಷಿಸಲಾಗಿದೆ ಎಂದು ಹೇಳಿದರು.

ಇದು ಸಾವಯವ ರಾಗಿಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು. ಭಾರತದ ಒಣಭೂಮಿಗಳಲ್ಲಿ ರೈತರು ಹೆಚ್ಚು ರಾಗಿ ಬೆಳೆಯಲು ಪ್ರೇರೇಪಿಸಲಾಗುವುದು ಎಂದು ಹೇಳಿದರು.

ಇನ್ನು ಕೇದಾರೋತ್ಥಾನ ಟ್ರಸ್ಟ್‌ನಿಂದ ಉಡುಪಿ ತಾಲ್ಲೂಕಿನಾದ್ಯಂತ ಹಡಿಲುಭೂಮಿ ಕೃಷಿ ಆಂದೋಲನ ನಡೆಸಲಾಗುತ್ತಿದ್ದು 1,500 ಎಕರೆಗೂ ಹೆಚ್ಚು ಹಡಿಲುಭೂಮಿಯಲ್ಲಿ ಭತ್ತದ ನಾಟಿ ಮಾಡಲಾಗಿದೆ. ಕೇಂದ್ರ ಸಚಿವೆಯಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿರುವ ಹಿನ್ನಲೆಯಲ್ಲಿ ಬೆಳಗ್ಗೆ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಅವರಿಂದ ಫಲ ಮಂತ್ರಾಕ್ಷತೆ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net