More

    ರೈಲು ನಿಲ್ದಾಣದಲ್ಲಿ ವಿಶ್ವ ಮಟ್ಟದ ಅಭಿವೃದ್ಧಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಣ್ಣನೆ

    ಬೆಂಗಳೂರು: ರೈಲು ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ರೈಲ್ವೆ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ನೈಋತ್ಯ ರೈಲ್ವೆ ವತಿಯಿಂದ ಸರ್​.ಎಂ.ವಿಶೇಶ್ವರಯ್ಯ ಟರ್ಮಿನಲ್ ನಿಲ್ದಾಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಒಂದು ನಿಲ್ದಾಣ ಒಂದು ಉತ್ಪನ್ನ ಮಳಿಗೆ, ಪ್ರಧಾನಮಂತ್ರಿ ಜನೌಷಧ ಕೇಂದ್ರ, ಗತಿಶಕ್ತಿ ಕಾಗೋರ್ ಟರ್ಮಿನಲ್ಸ್​, ಗೂಡ್ಸ್​ ಶೆಡ್​ ಸೇರಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಿ ಮಾತನಾಡಿದರು.

    ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಲಭ್ಯವಾಗುವ ಸೌಲಭ್ಯಗಳು ರೈಲು ನಿಲ್ದಾಣಗಳಲ್ಲೂ ಸಿಗಬೇಕು ಎಂಬ ನಿಟ್ಟಿನಲ್ಲಿ ನಿಲ್ದಾಣದ ನವೀಕರಣ ಹಾಗೂ ಇತರ ಅಭಿವೃದ್ಧಿ ಕೆಲಸಗಳಿಗೆ ವಿಶೇಷ ಅನುದಾನ ನೀಡಲಾಗುತ್ತಿದೆ. ವಿಶೇಶ್ವರಯ್ಯ ರ್ಟಮಿನಲ್​ ಹಾಗೂ ಬಂಗಾರಪೇಟೆ ನಿಲ್ದಾಣದಲ್ಲಿ ಜನೌಷಧ ಕೇಂದ್ರಗಳನ್ನು ತೆರೆಯುವ ಮೂಲಕ ಸಾಮಾನ್ಯರಿಗೆ ಕಡಿಮೆ ದರದಲ್ಲಿ ಅಗತ್ಯ ಔಷಧ ಲಭ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

    ಸಂಸದ ಪಿ.ಸಿ. ಮೋಹನ್​ ನೈಋತ್ಯ ರೈಲ್ವೆಯ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ರಾವೇಂದ್ರ, ವಿಭಾಗೀಯ ವಿದ್ಯುತ್​ ಎಂಜಿನಿಯರ್​ ಪೂಜಾ, ಡಿಆರ್​ಯುಸಿಸಿ ಸದಸ್ಯ ಆರ್​. ಗಣಪತಿ ಮತ್ತಿತರರಿದ್ದರು.

    ವರ್ಚುವಲ್​ ಮೂಲಕ ಪ್ರಧಾನಿ ಚಾಲನೆ

    ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ ಕಲಬುರಗಿ-ಬೆಂಗಳೂರು-ಕಲಬುರಗಿ ಹಾಗೂ ಮೈಸೂರು-ಚೆನ್ನೈ-ಮೈಸೂರು ವಂದೇ ಭಾರತ್​ ಎಕ್ಸ್​ಪ್ರೆಸ್​, 40 ನಿಲ್ದಾಣಗಳಲ್ಲಿ ಒಂದು ನಿಲ್ದಾಣ ಒಂದು ಉತ್ಪನ್ನ, ಸರ್​ ಎಂ. ವಿಶೇಶ್ವರಯ್ಯ ಹಾಗೂ ಬಂಗಾರಪೇಟೆಯಲ್ಲಿ ಪ್ರಧಾನ ಮಂತ್ರಿ ಜನೌಷಧ ಕೇಂದ್ರ, ಥಣಿಸಂದ್ರದಲ್ಲಿ ವಂದೇ ಭಾರತ್​ ಸ್ಲೀಪರ್​ ಕೋಚ್​ ರೈಲುಗಳ ಕಾರ್ಯಗಾರ ಮತ್ತು ಡಿಪೋಗೆ ಶಂಕುಸ್ಥಾಪನೆ, ದೊಡ್ಡಬಳ್ಳಾಪುರದ ಒಡ್ಡರಹಳ್ಳಿಯಲ್ಲಿ ಗತಿ ಶಕ್ತಿ ಮಲ್ಟಿಮೋಡಲ್​ ಕಾಗೋರ್ ರ್ಟಮಿನಲ್​ಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್​ ವೇದಿಕೆ ಮೂಲಕ ಚಾಲನೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts