ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಹರಿಕಥಾ ವಿದ್ವಾನ್ ಶೋಭಾ ನಾಯ್ಡು(57) ಅವರು ಚಿಕಿತ್ಸೆ ಫಲಿಸದೇ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಖ್ಯಾತ ಹರಿಕಥಾ ವಿದ್ವಾನ್ ಗುರುರಾಜುಲು ನಾಯ್ಡು ಅವರ ಪುತ್ರಿಯಾಗಿದ್ದ ಶೋಭಾ ನಾಯ್ಡು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ಕೆಲ ತಿಂಗಳಿಂದ ಕಿಡ್ನಿ ವೈಫಲ್ಯದ ಹಿನ್ನೆಲೆಯಲ್ಲಿ ಡೈಯಾಲಿಸೀಸ್‌ಗೆ ಒಳಗಾಗಿದ್ದರು. ಚಿಕಿತ್ಸೆ ಫಲಿಸದೇ, ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಕರೊನಾ ವೈರಸ್ ಅಟ್ಟಹಾಸದ ಹಿನ್ನೆಲೆಯಲ್ಲಿ, ಇಂದೇ ಶೋಭಾ ನಾಯ್ಡು ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನೆರವೇರಿದೆ.
ಲಾಕ್ಡೌನ್ನಿಂದ ಹಳ್ಳಿಗಳ ರಸ್ತೆ ಬಂದ್: ಆಸ್ಪತ್ರೆಗೆ ಸಾಗಿಸಲಾಗದೇ ಮಾರ್ಗಮಧ್ಯೆ ವೃದ್ಧೆ ಸಾವು