More

    ಶನಿವಾರಸಂತೆಯಲ್ಲಿ ಅದ್ದೂರಿ ಶೋಭಾಯಾತ್ರೆ

    ಶನಿವಾರಸಂತೆ: ಹನುಮ ಜಯಂತಿ ಪ್ರಯುಕ್ತ ಹಿಂದು ಜಾಗರಣಾ ವೇದಿಕೆಯ ಶನಿವಾರಸಂತೆ ಮತ್ತು ಸೋಮವಾರಪೇಟೆ ಘಟಕ ವತಿಯಿಂದ ಭಾನುವಾರ 2ನೇ ವರ್ಷದ ಶೋಭಾಯಾತ್ರೆ ಅದ್ದೂರಿಯಾಗಿ ನಡೆಯಿತು.

    ಪಟ್ಟಣದ ಶ್ರೀ ರಾಮಮಂದಿರದಲ್ಲಿ ವಿವಿಧ ಪೂಜಾ ಕೈಂಕರ್ಯ ನೆರವೇರಿತು. ದೇವಾಲಯದಲ್ಲಿ ಆಂಜನೇಯ ದೇವರಿಗೆ ವಿಶೇಷ ಪೂಜಾ ವಿಧಿವಿಧಾನವನ್ನು ನೆರವೇರಿಸಲಾಯಿತು. ಈ ಸಂದರ್ಭ ನೂರಾರು ಭಕ್ತರು ಪಾಲ್ಗೊಂಡಿದ್ದರು.

    ಸಂಜೆ 4.30ಕ್ಕೆ ಪಟ್ಟಣದ ತ್ಯಾಗರಾಜ ಕಾಲನಿಯ ಶ್ರೀಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಶೋಭಯಾತ್ರೆಗೆ ಚಾಲನೆ ನೀಡಲಾಯಿತು. ದೇವಸ್ಥಾನದಿಂದ ಹೊರಟ ಶೋಭಯಾತ್ರೆ ಪಟ್ಟಣದ ಮುಖ್ಯರಸ್ತೆ ಮಾರ್ಗವಾಗಿ ಸಂಚರಿಸಿ ಗುಡುಗಳಲೆ ಶ್ರೀ ಬಸವೇಶ್ವರ ದೇವಾಲಯ ತಲುಪಿತು. ತದನಂತರ ಪಟ್ಟಣದ ಬೈಪಾಸ್ ರಸ್ತೆ ಮಾರ್ಗವಾಗಿ ಬಂದು ಕೆಆರ್‌ಸಿ ವೃತ್ತದಲ್ಲಿರುವ ಬನ್ನಿ ಮಂಟಪ ತಲುಪಿತು. ಆ ಮೂಲಕ ಶೋಭಯಾತ್ರೆ ರಾತ್ರಿ 8 ಗಂಟೆ ಸುಮಾರಿಗೆ ಪೂರ್ಣಗೊಂಡಿತು.

    ಮೆರವಣಿಗೆಯಲ್ಲಿ ನಾಸಿಕ್ ಬ್ಯಾಂಡ್, ಚಂಡೆವಾದ್ಯ, ಡಿಜೆ ಸೌಂಡ್ ವ್ಯವಸ್ಥೆ ಮಾಡಲಾಗಿತ್ತು. ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ಕೇಸರಿ ತಳಿರು ತೋರಣ ಕಂಗೊಳಿಸುತ್ತಿತ್ತು. ಜತೆಗೆ ಸಿಡಿಮದ್ದಿನ ಪ್ರದರ್ಶನ ನಡೆಯಿತು. ಶೋಭಾಯಾತ್ರೆಯಲ್ಲಿ ಪಟ್ಟಣ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

    ಕೊನೆಯಲ್ಲಿ ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ಭಕ್ತರು, ಸಾರ್ವಜನಿಕರಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಶೋಭಯಾತ್ರೆ ಸಂದರ್ಭ ಪೊಲೀಸ್ ಇಲಾಖೆ ಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಮಾಡಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts