

ಬೆಂಗಳೂರು; ಹಾಲಿನ ದರ ಏರಿಕೆ, ಮೆಟ್ರೋ, ಬಸ್ ಟಿಕೆಟ್ ದರ ಏರಿಕೆ ಬಳಿಕ ಜಿಎಸ್‌ಟಿಯಿಂದ ನಿತ್ಯ ಪರದಾಡುತ್ತಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ರಾಜ್ಯದ ಎಲ್ಲಾ ಬಹುಮಹಡಿ ಮತ್ತು ಎತ್ತರದ ಕಟ್ಟಡಗಳಿಗೆ 1% ಸೆಸ್ (Cess) ವಿಧಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಅಗ್ನಿಶಾಮಕ ದಳದ ಕಾಯ್ದೆ ಅನ್ವಯ ಆಗುವ ಕಟ್ಟಡಗಳಿಗೆ ಶೇ 1 ರ ಸೆಸ್ ವಿಧಿಸಲಾಗುತ್ತದೆ. ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು, ಅಪಾರ್ಟ್ಮೆಂಟ್ಗಳು ಸೇರಿ ಎತ್ತರದ ಬಹುಮಹಡಿ ಕಟ್ಟಡಗಳಿಗೆ ಸೆಸ್ ವಿಧಿಸಲಾಗುತ್ತದೆ ಎಂದು ಹೆಚ್ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಅಗ್ನಿ ಸುರಕ್ಷತಾ ಕ್ರಮಗಳನ್ನು ಬಲಪಡಿಸಲು ಮತ್ತು ಇಲಾಖೆಯ ಸಬಲೀಕರಣಕ್ಕಾಗಿ ಈ ಸೆಸ್ ಅನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ.
(ಏಜೆನ್ಸೀಸ್)
ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ, ರಾಜ್ಯ ಸಚಿವ ಸಂಪುಟವು 'ಬಾಲ್ಯ ವಿವಾಹ ನಿಷೇಧ ಕಾಯ್ದೆ'ಗೆ ಮಹತ್ವದ ತಿದ್ದುಪಡಿಗಳನ್ನು ತರಲು ಒಪ್ಪಿಗೆ ಸೂಚಿಸಿದೆ. ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ 2025’ಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಬಾಲ್ಯ ವಿವಾಹ ತಡೆಯುವುದಕ್ಕಾಗಿ ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರ ವಿರುದ್ಧವೂ ಕ್ರಮ ಕೈಗೊಳ್ಳುವ ಬಗ್ಗೆ ಈ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ. ತೊಟ್ಟಿಲು ಮದುವೆಯಾದರೂ ಶಿಕ್ಷೆ ಇರಲಿದೆ.