ಗುಂಡಿಕ್ಕಿ ಶ್ರೀಲಂಕಾ ಕ್ರಿಕೆಟ್​ ತಂಡದ ಮಾಜಿ ನಾಯಕ ಧಮ್ಮಿಕಾ ನಿರೋಶನ ಹತ್ಯೆ

Dhammika Niroshana
Published on

ಕೊಲಂಬೊ: ಆಘಾತಕಾರಿ ಘಟನೆಯೊಂದರಲ್ಲಿ ಶ್ರೀಲಂಕಾ ಅಂಡರ್​-19 ತಂಡದ ಮಾಜಿ ನಾಯಕ ಧಮ್ಮಿಕಾ ನಿರೋಶನ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಂಲಂಗೋಡದಲ್ಲಿರುವ ನಿರೋಶನ ಅವರ ನಿವಾಸದಲ್ಲಿ ಮಂಗಳವಾರ (ಜುಲೈ 16) ಈ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆ ನಡೆದಾಗ ನಿರೋಶನ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿದ್ದರು ಎಂದು ವರದಿಯಾಗಿದೆ. ಹತ್ಯೆಗೆ 12 ಬೋರ್​ ಪಿಸ್ತೂಲ್​ಅನ್ನು ಬಳಸಲಾಗಿದೆ ಎಂದು ತಿಳಿದು ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಧಮ್ಮಿಕಾ ನಿರೋಶನ ಅಂಡರ್​-19 ವಿಶ್ವಕಪ್​ನಲ್ಲಿ ಶ್ರೀಲಂಕಾ ಕ್ರಿಕೆಟ್​ ತಂಡವನ್ನು ಮುನ್ನಡೆಸಿದ್ದರು. ಶ್ರೀಲಂಕಾ ಕ್ರಿಕೆಟ್​ ತಂಡಕ್ಕೆ ಲಭ್ಯವಾದ ಅತ್ಯುತ್ತಮ ವೇಗದ ಬೌಲಿಂಗ್ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದರು. ಅವರು 20ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಅನ್ನು ತೊರೆದರು.

ನಿರೋಶನಾ 2001 ಮತ್ತು 2004 ರ ನಡುವೆ ಗಾಲೆ ಕ್ರಿಕೆಟ್ ಕ್ಲಬ್‌ ಪರ ಒಟ್ಟು 12 ಪ್ರಥಮ ದರ್ಜೆ ಪಂದ್ಯಗಳನ್ನು ಮತ್ತು 8 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ. ಉತ್ತಮ ಆಲ್‌ರೌಂಡರ್ ಆಗಿದ್ದ ನಿರೋಶನಾ 300 ಕ್ಕೂ ಹೆಚ್ಚು ರನ್ ಗಳಿಸಿ . ಸಕ್ರಿಯ ವೃತ್ತಿಜೀವನದಲ್ಲಿ 19 ವಿಕೆಟ್‌ಗಳನ್ನು ಪಡೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net