ಗೋಹತ್ಯೆ ನಿರಾಕರಿಸಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ; ವಿಡಿಯೋ ವೈರಲ್​

Cow Slaughter
Published on

ಹಿಂದೂಪುರ: ಕಸಾಯಿಖಾನೆಯಲ್ಲಿ ಗೋವುಗಳನ್ನು ಹತ್ಯೆ ಮಾಡಲು ನಿರಾಕಸಿದ ಎಂಬ ಕಾರಣಕ್ಕೆ ಯುವಕನನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಘಟನೆ ಆಂಧ್ರಪ್ರದೇಶದ ಹಿಂದೂಪುರದಲ್ಲಿ ನಡೆದಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬರುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಸಂತ್ರಸ್ತ ವಾಜಿದ್​ನನ್ನು ಕಸಾಯಿಖಾನೆ ಮಾಲೀಕರು ಎಮ್ಮೆಯನ್ನು ಕಡಿಯುವಂತೆ ಹೇಳಿ ಕರೆಸಿಕೊಂಡಿದ್ದರು. ಬಳಿಕ ಗೋವುಗಳನ್ನು ಹತ್ಯೆ ಮಾಡುವಂತೆ ಸೂಚಿಸಿದ್ದಾರೆ. ಗೋವುಗಳನ್ನು ಅನೇಕರು ಪೂಜಿಸುತ್ತಾರೆ. ಆದ್ದರಿಂದ ನಾನು ಯಾವುದೇ ಕಾರಣಕ್ಕೂ ಹತ್ಯೆ ಹಸುಗಳನ್ನು ಕಡಿಯುವುದಿಲ್ಲ ಎಂದು ಹೇಳಿ ಅಲ್ಲಿಂದ ಹೊರ ಬಂದಿದ್ದಾನೆ.

ಇದರಿಂದ ಕುಪಿತಗೊಂಡ ಕಸಾಯಿಖಾನೆ ಮಾಲೀಕರು ಆತನನ್ನು ಫೋನ್​ ಕದ್ದಿದ್ದಾನೆ ಎಂದು ಆರೋಪಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದಂತೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏತನ್ಮಧ್ಯೆ, ಮಾನವ ಹಕ್ಕುಗಳ ಸಂಘಟನೆಗಳು ಮತ್ತು ಸ್ಥಳೀಯ ಸಂಘಟನೆಗಳು ಈ ಅಮಾನವೀಯ ಕೃತ್ಯವನ್ನು ಖಂಡಿಸಿದ್ದು, ಅಕ್ರಮ ಕಸಾಯಿಖಾನೆಯನ್ನು ನಡೆಸುತ್ತಿರುವವರಿಗೆ ಮತ್ತು ವಾಜಿದ್ ಮೇಲಿನ ಹಲ್ಲೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net